ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

Date:

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

76 ವರ್ಷದ ವಿ.ಶ್ರೀನಿವಾಸ್ ಪ್ರಸಾದ್ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಇದೀಗ, ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಪ್ರಸಾದ್‌ ಅವರನ್ನು ದಾಖಲು ಮಾಡಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಅಂತ ಹೇಳಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

“ಶ್ರೀನಿವಾಸ್ ಪ್ರಸಾದ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಶುಗರ್, ಬಿಪಿಯಲ್ಲಿ ವ್ಯತ್ಯಯವಾಗಿದೆ. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ತಜ್ಞ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ” ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್‌ ಅಭ್ಯರ್ಥಿ ಧ್ರುವನಾರಾಯಣ ವಿರುದ್ಧ ಸ್ಪರ್ಧೆ ಮಾಡಿ ಗೆದ್ದಿದ್ದರು. ಶ್ರೀನಿವಾಸ್ ಪ್ರಸಾದ್ ಅವರು ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರು. ಇದೇ ಮಾರ್ಚ್ 17ರಂದು ಅನಾರೋಗ್ಯದಿಂದ ರಾಜಕೀಯ ನಿವೃತ್ತಿ ಪಡೆಯುವುದಾಗಿ ವಿ.ಶ್ರೀನಿವಾಸ್ ಪ್ರಸಾದ್ ಘೋಷಿಸಿದ್ದರು. ಹೀಗಾಗಿ, ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...