ಮೈಸೂರು | ಅಸ್ಪೃಶ್ಯತೆ ಆಚರಣೆ; ಗ್ರಾಮಸ್ಥರಿಗೆ ಅಧಿಕಾರಿಗಳ ಎಚ್ಚರಿಕೆ

Date:

21ನೇ ಶತಮಾನಕ್ಕೆ ಕಾಲಿಟ್ಟರು ಕೂಡ ಇನ್ನು ಅಸ್ಪೃಶ್ಯತೆ ಜೀವಂತವಾಗಿದೆ. ಯುವಕನೊಬ್ಬನಿಗೆ ದೇವಸ್ಥಾನ ಪ್ರವೇಶಿಸದಂತೆ ಗ್ರಾಮಸ್ಥರು ತಡೆದು ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕ್ಷೇತ್ರ ವರುಣಾದ ಕಿರಾಳು ಗ್ರಾಮದಲ್ಲಿ ನಡೆದಿದೆ.

ಕಿರಾಳು ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವ ಬಗ್ಗೆ ನವೀನ್ ಎಂಬವರು ತಹಶೀಲ್ದಾರ್​ಗೆ ದೂರು ನೀಡಿದ್ದರು. ದೂರು ಬಂದ ಹಿನ್ನೆಲೆ, ಅಧಿಕಾರಿಗಳು ಗ್ರಾಮಸ್ಥರ ಸಭೆ ಕರೆದು ಅನಿಷ್ಠ ಪದ್ಧತಿಯ ಆಚರಣೆಗೆ ಕಡಿವಾಣ ಹಾಕಿದ್ದಾರೆ. ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಿ ಅಸ್ಪೃಶ್ಯತೆ ಆಚರಿಸದಂತೆ ಎಚ್ಚರಿಕೆ ನೀಡಿದ್ದಾರೆ.

“ವಿದ್ಯಾವಂತ ನಾಗರಿಕನಾದ ನನಗೆ ಕಿರಾಳು ಗ್ರಾಮದ ಶಂಭು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪ್ರವೇಶಿಸದಂತೆ ಅರ್ಚಕರು ಹಾಗೂ ಗ್ರಾಮಸ್ಥರು ನಿರ್ಬಂಧ ಹೇರಿದ್ದಾರೆ. ನನಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡದೆ ಅಸ್ಪೃಶ್ಯತೆ ಆಚರಣೆ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿ ನವೀನ್ ಎಂಬವವರು ತಹಶೀಲ್ದಾರ್​ಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ಬಂದ ಕೂಡಲೇ ಎಚ್ಚೆತ್ತ ತಹಶೀಲ್ದಾರ್ ಅವರು ವರುಣಾ ಠಾಣೆಯ ಪಿಎಸ್‌ಐ ಚೇತನ್ ಹಾಗೂ ಇತರ ಅಧಿಕಾರಿಗಳ ಜತೆಗೆ ಗ್ರಾಮಕ್ಕೆ ತೆರಳಿದ್ದಾರೆ. ಈ ವೇಳೆ, ಗ್ರಾಮಸ್ಥರ ಮನವೊಲಿಸಿ ನವೀನ್ ಅವರು ದೇವಸ್ಥಾನಕ್ಕೆ ಪ್ರವೇಶ ಮಾಡುವಂತೆ ಅವಕಾಶ ಕಲ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ; ಕರಾವಳಿ ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

ಅಧಿಕಾರಿಗಳ ಸಮ್ಮುಖದಲ್ಲೇ ನವೀನ್ ದೇವಸ್ಥಾನ ಪ್ರವೇಶ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹಾಗೆಯೇ, ದೇವಸ್ಥಾನದ ಆವರಣದಲ್ಲಿಯೇ, ಗ್ರಾಮಸ್ಥರನ್ನು ಸಭೆ ಕರೆದು ಅಸ್ಪೃಶ್ಯತೆ ಆಚರಣೆ ಮಾಡದಂತೆ ಜಾಗೃತಿ ಮೂಡಿಸಿದ್ದಾರೆ. ಹಾಗೆಯೇ, ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ತಹಶೀಲ್ದಾರ್ ಮಹೇಶ್ ಕುಮಾರ್‌, ಉಪ ತಹಶೀಲ್ದಾರ್ ಲತಾ ಶರಣಮ್ಮ, ಗ್ರಾಮ ಆಡಳಿತಾಧಿಕಾರಿಗಳಾದ ಕೀರ್ತಿ ಕುಮಾರ್ ಮತ್ತು ಅಬ್ದುಲ್ ರಶೀದ್ ಗ್ರಾಮಕ್ಕೆ ತೆರಳಿ ಅಸ್ಪೃಶ್ಯತೆಗೆ ಕಡಿವಾಣ ಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...