ನೇಹಾ ಹತ್ಯೆ | ನನ್ನೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಿದೆ ಎಂದ ಆರೋಪಿ ಫಯಾಜ್ – ವರದಿ

Date:

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. “ನೇಹಾ ಆತನೊಂದಿಗೆ ಮಾತನಾಡಲು ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಆರೋಪಿ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ” ಎಂದು ಪೊಲೀಸ್ ಸಿಬ್ಬಂದಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ. 

ನೇಹಾ ಹಿರೇಮಠ ಹತ್ಯೆ ಪ್ರಕರಣ ಕರ್ನಾಟಕ ಮಾತ್ರವಲ್ಲದೆ, ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ. ಸಿನಿಮಾ ರಂಗದ ನಟ, ನಟಿಯರು ಸೇರಿದಂತೆ ಇಡೀ ರಾಜ್ಯದ ಜನತೆ ನೇಹಾ ಹಿರೇಮಠ ಹತ್ಯೆನ್ನು ಖಂಡಿಸಿದ್ದಾರೆ.

ಕೊಲೆ ಆರೋಪಿ ಫಯಾಜ್‌ನನ್ನು ಬಂಧಿಸಿರುವ ಪೊಲೀಸರು ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದ ಸಿಬ್ಬಂದಿ ಎದುರು ಆರೋಪಿ ಕೊಲೆ ವಿಚಾರ ಬಾಯಿಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ವಾರದಿಂದ ನೇಹಾ ಜತೆಗೆ ಮಾತನಾಡಿಸಲು ಪ್ರಯತ್ನಿಸಿದೆ. ಆದರೆ, ನೇಹಾ ನನ್ನ ಜತೆಗೆ ಮಾತನಾಡಲು ಇಷ್ಟ ಇಲ್ಲ ಅಂತ ಅವೈಡ್ ಮಾಡುತ್ತಿದ್ದಳು. ಬಿವಿಬಿ ಕಾಲೇಜಿಗೆ ಏ.18 ರಂದು ಅವಳು ಪರೀಕ್ಷೆ ಬರೆಯಲು ಬಂದಿದ್ದಳು. ಆಗ ನಾನು ಮತ್ತೆ ಕಾಲೇಜಿಗೆ ಹೋದೆ, ನೇಹಾ ಪರೀಕ್ಷೆ ಮುಗಿಯುವವರೆಗೂ ಕಾದೆ. ಅವಳು ಹೊರಗಡೆ ಬಂದ ಬಳಿಕ ಮಾತನಾಡಿಸಲು ಪ್ರಯತ್ನಿಸಿದೆ. ಆದರೆ, ಅವಳು ಮಾತನಾಡುವುದಿಲ್ಲ ಎಂದಳು. ಹಾಗಾಗಿ, ಅವಳಿಗೆ ಚಾಕುವಿನಿಂದ ಚುಚ್ಚಿದೆ” ಎಂದು ಕಾರಾಗೃಹ ಸಿಬ್ಬಂದಿಗೆ ಫಯಾಜ್ಹೇಳಿಕೊಂಡಿದ್ದಾನೆ ಎಂದು ‘ಟಿವಿ9’ ವರದಿ ಮಾಡಿದೆ. 

ನೇಹಾಳಿಗೆ ಚಾಕು ಹಾಕುವ ಸಮಯದಲ್ಲಿ ನನ್ನ ಎರಡು ಕೈ ಬೆರಳು ಮತ್ತು ಕಾಲಿಗೆ ಗಾಯವಾಗಿದೆ. ಏನಾಗಿದೆ ಎಂಬ ಬಗ್ಗೆ ಗೊತ್ತಿಲ್ಲಎಂದಿದ್ದಾನೆ.

ಈ ಸುದ್ದಿ ಓದಿದ್ದೀರಾ? ಪಕ್ಷ ಸೂಚಿಸಿದರೇ ಕುಮಾರಸ್ವಾಮಿ ಪರ ಪ್ರಚಾರ: ಸುಮಲತಾ ಅಂಬರೀಶ್

ಏ.18ರಂದು ಮಧ್ಯಾಹ್ನ ಆರೋಪಿ ಫಯಾಜ್ ಕಾಲೇಜಿನ ಕ್ಯಾಂಪಸ್‌ ಒಳಗೆ ನುಗ್ಗಿ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಗೆ ಚಾಕುವಿನಿಂದ ಹತ್ತಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದನು.

ಆರೋಪಿ ಫಯಾಜ್ (23) ಮೊದಲ ವರ್ಷದ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (ಎಂಸಿಎ) ವಿದ್ಯಾರ್ಥಿಯಾಗಿದ್ದನು. ಚಾಕು ಮತ್ತು ಮಾಸ್ಕ್ ಧರಿಸಿ ಕಾಲೇಜು ಕ್ಯಾಂಪಸ್ ಒಳಗೆ ಹೋಗಿ ಮಧ್ಯಾಹ್ನ 3.30 ಸುಮಾರಿಗೆ ನೇಹಾಳ ಎದೆ ಮತ್ತು ಕುತ್ತಿಗೆಗೆ ಹಲವು ಬಾರಿ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಎಂಸಿಎ ಬಿಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...