ಬಿಜೆಪಿ ಶಾಸಕ ಸೋಮಶೇಖರ್, ಹೆಬ್ಬಾರ್ ಅಮಾನತಿಗೆ ಶಿಫಾರಸು!

Date:

ರಾಜ್ಯ ಬಿಜೆಪಿಯಲ್ಲಿ ಒಳಜಗಳ, ಬಂಡಾಯ, ಆಂತಿರಿಕ ಬಿಕ್ಕಟ್ಟು ಮುನ್ನೆಲೆಯಲ್ಲಿದೆ. ಬಿಜೆಪಿ ಹೈಕಮಾಂಡ್‌ ಎಷ್ಟೇ ಪ್ರಯತ್ನಿಸಿದರೂ, ನೋಟಿಸ್‌ ಕೊಟ್ಟರು ಆಂತರಿಕ ಬಿಕ್ಕಟ್ಟಿಗೆ ‘ಫುಲ್‌ ಸ್ಟಾಪ್‌’ ಬಿದ್ದಿಲ್ಲ. ಅಲ್ಲದೆ, ನಾಯಕತ್ವ ಬದಲಾವಣೆ, ಯತ್ನಾಳ್‌ ಉಚ್ಚಾಟನೆಯ ಕುರಿತು ಊಹಾಪೋಹ, ವದಂತಿ, ಗುಸು-ಗುಸು ಚರ್ಚೆಗಳು ನಡೆಯುತ್ತಿವೆ. ಇದೆಲ್ಲದರ ನಡುವೆ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆಯೂ ನಡೆದಿದೆ. ಸದ್ಯ, ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಜೊತೆಗೆ, ಬಿಜೆಪಿ ಶಾಸಕರಾದ ಎಸ್‌.ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ವಿರುದ್ಧ ಕ್ರಮ ಕೈಗೊಂಡು ಅಮಾನತು ಮಾಡಲು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ ಎಂದು ವರದಿಯಾಗಿದೆ.

ಶನಿವಾರ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆದಿದೆ. ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಸಂಸದ ಗೋವಿಂದ್ ಕಾರಜೋಳ, ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಭಾಗವಹಸಿದ್ದರು. ಸಭೆಯಲ್ಲಿ, “ರಾಜ್ಯ ನಾಯಕತ್ವದಲ್ಲಿ ಯಾವುದೇ ಬದಲಾಣವೆ ಇಲ್ಲ. ಮುಂಬರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗಳನ್ನು ಪಕ್ಷವು ವಿಜಯೇಂದ್ರ ನೇತೃತ್ವದಲ್ಲಿಯೇ ಎದುರಿಸಲಿದೆ” ಎಂದು ಮೋಹನ್ ದಾಸ್‌ ಅಗರ್ವಾಲ್ ಹೇಳಿರುವುದಾಗಿ ತಿಳಿದುಬಂದಿದೆ.

ಅಲ್ಲದೆ, ಪಕ್ಷದ ಸಿದ್ಧಾಂತಕ್ಕೆ ಬದ್ದರಾಗಿ ಎಲ್ಲರೂ ಕೆಲಸ ಮಾಡಬೇಕು. ಪಕ್ಷವನ್ನು ಬಪಡಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರಿಗೆ ಸೂಚನೆ ನೀಡಲು ಸಭೆಯು ತೀರ್ಮಾನಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ, ತಮ್ಮದೇ ಬಣ ಕಟ್ಟಿಕೊಂಡಿರುವ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಉತ್ತರ ಬಂದ ಬಳಿಕ ಕ್ರಮ ಕೈಗೊಳ್ಳವುದಾಗಿಯೂ ನಿರ್ಧರಿಸಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಆಗ್ರಹ

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಗರ್ವಾಲ್, “ಮುಂದಿನ ವರ್ಷ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಪಕ್ಷವು ಪ್ರಬಲವಾಗಿ ಎದುರಿಸಲಿದೆ. ನಾವು ಕರ್ನಾಟಕದಲ್ಲಿ 71 ಲಕ್ಷ ಕಾರ್ಯಕರ್ತರನ್ನು ಹೊಂದಿದ್ದೇವೆ. ರಾಜ್ಯದಲ್ಲಿ ಯತ್ನಾಳ್‌ ವರ್ಸಸ್ ವಿಜಯೇಂದ್ರ ಆಥವಾ ಯತ್ನಾಳ್‌ ವರ್ಸಸ್‌ ಬಿಜೆಪಿ ಎಂಬುದೇನೂ ಇಲ್ಲ” ಎಂದು ಹೇಳಿದ್ದಾರೆ.

“ಕೆಲ ನಾಯಕರು ಅಶಿಸ್ತಿನಿಂದ ವರ್ತಿಸುತ್ತಿದ್ದಾರೆ. ಅವರಿಗೆ ಕಡಿವಾಣ ಹಾಕುವ ಬಗ್ಗೆ ಚರ್ಚಿಸಲಾಗಿದೆ, ಕಳೆದ ಕೆಲವು ತಿಂಗಳಿಂದ ಶಾಸಕ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಅಮಾನತು ಮಾಡುವಂತೆ ಹೈಕಮಾಂಡ್‌ಗೆ ಮನವಿ ಮಾಡಲು ನಿರ್ಧರಿಸಿದ್ದೇವೆ” ಎಂದು ವಿಜಯೇಂದ್ರ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...