ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆ ವಿಚಾರ: ಅಗೌರವ ಮಾತ್ರವಲ್ಲ, ಪ್ರಧಾನಿಯ ಹೇಡಿತನ: ಸಿಎಂ ಸಿದ್ದರಾಮಯ್ಯ

Date:

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್‍ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಭಾರತದ ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯವರ ಉತ್ತರ ಇಲ್ಲದೆ ವಂದನಾ ನಿರ್ಣಯವನ್ನು ಅಂಗೀಕರಿಸಲಾಗಿದೆ. ಇದನ್ನು ಓರ್ವ ಪ್ರಧಾನಿ ಸಂಸತ್ತನ್ನು ನಿರ್ಲಕ್ಷಿಸುವುದೆಂದರೆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ನಡೆ ಎಂದರ್ಥ ಎಂದು ಉಲ್ಲೇಖಿಸಿದ್ದಾರೆ.

ಅಧಿಕಾರರೂಢ ಬಿಜೆಪಿ ಪಕ್ಷ ಮೊದಲು ವಿರೋಧ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡದೆ ತಡೆಯಿತು, ನಂತರ ತಾನೂ ಮಾತನಾಡದೆ ಮೌನಕ್ಕೆ ಶರಣಾಯಿತು. ಇದು ಬಹಳ ಆತಂಕಕಾರಿ ಬೆಳವಣಿಗೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಮ್ಮ ವಂದನಾ ನಿರ್ಣಯದ ಭಾಷಣದಲ್ಲಿ ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರ ಪುಸ್ತಕದಲ್ಲಿದ್ದ ದೇಶದ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಚಾರಗಳನ್ನು ಪ್ರಸ್ತಾಪಿಸಲು ಮುಂದಾದಾಗ ಅವರ ಮಾತನ್ನು ಸಂಪೂರ್ಣವಾಗಿ ತಡೆಯಲಾಯಿತು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಪೀಕರ್ ನಡೆನುಡಿ ತಟಸ್ಥವಾಗಿರಬೇಕೆಂಬ ಸಂವಿಧಾನದ ಆಶಯದ ಸಾರಾಸಗಟು ಉಲ್ಲಂಘನೆಯಿದು!

ಆ ಪುಸ್ತಕದಲ್ಲಿ 2020ರ ಚೀನಾ ಗಡಿ ಸಂಘರ್ಷದ ಸಂದರ್ಭ ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಳ್ಳುವ ಬದಲು ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ಮುಖ್ಯಸ್ಥರಿಗೆ ಕೇವಲ ‘ಜೋ ಉಚಿತ್ ಸಮಝೋ, ವೋಹ್ ಕರೋ’ (ನಿಮಗೆ ಯೋಗ್ಯವೆನಿಸಿದ್ದನ್ನು ಮಾಡಿ) ಎಂದು ಹೇಳಿದ್ದಾಗಿ ದಾಖಲಾಗಿದೆ. ಇದು ಪ್ರಧಾನಿ ಮೋದಿ ಅವರ ನಾಯಕತ್ವದ ಟೊಳ್ಳುತನವನ್ನು ಜಗಜ್ಜಾಹೀರುಗೊಳಿಸಿರುವುದು ಮಾತ್ರವಲ್ಲ, ಮೋದಿ ತಾನೇ ಕಟ್ಟಿಕೊಂಡಿರುವ 56 ಇಂಚಿನ ಎದೆಯೊಳಗಿನ ಪುಕ್ಕಲುತನವನ್ನು ಬಯಲು ಮಾಡಿದೆ ಎಂದು ಅವರು ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಈ ಪಲಾಯನವಾದಿ ನಡೆಯು ಸಂಸತ್ತಿನಲ್ಲಿ ಚರ್ಚೆ ಆಗಬಾರದೆಂಬ ಕಾರಣಕ್ಕೆ ರಾಹುಲ್ ಗಾಂಧಿ ಅವರು ಭಾಷಣ ಮಾಡದಂತೆ ತಡೆಯಲಾಗಿದೆ. ದೇಶದ ಬಹುಸಂಖ್ಯೆಯ ಜನರನ್ನು ಪ್ರತಿನಿಧಿಸುವ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಇಂತಹ ಗಂಭೀರ ಪ್ರಶ್ನೆಗಳನ್ನು ಎದುರಿಸುವ ಬದಲು ಪ್ರಧಾನಿ ಮೋದಿ ಅವರು ಲೋಕಸಭೆಗೆ ಗೈರಾಗಿರುವುದು ನಿಜಕ್ಕೂ ನಾಚಿಕೆಗೇಡು.

ಪ್ರಧಾನಿ ಮೋದಿ ಸಂಪೂರ್ಣವಾಗಿ ಹೆದರಿದ್ದಾರೆ, ಹಾಗಾಗಿ ಅವರು ಸಂಸತ್ತಿಗೆ ಹಾಜರಾಗುವ ಧೈರ್ಯವನ್ನು ಮಾಡುವುದಿಲ್ಲ ಎಂದು ರಾಹುಲ್ ಗಾಂಧಿ ಮುಂಚಿತವಾಗಿಯೇ ಹೇಳಿದ್ದರು. ಅದರಂತೆ ಮೋದಿ ಅವರು ಲೋಕಸಭೆಯಿಂದ ದೂರ ಉಳಿಯುವ ಮೂಲಕ ತಾನು ಭೀತಿಗೊಂಡಿರುವುದನ್ನು ರುಜು ಮಾಡಿದ್ದಾರೆ. ತನ್ನ ನಿರ್ಧಾರದ ಬಗ್ಗೆ ಆತ್ಮವಿಶ್ವಾಸವಿಲ್ಲದವರು, ಹೀಗೆ ಚರ್ಚೆಯಿಂದ ಯಾವಾಗಲೂ ಹಿಂದೆ ಸರಿಯುವವರು ದೇಶಕ್ಕೆ ಅದ್ಯಾವ ಸಮರ್ಥ ನಾಯಕತ್ವ ನೀಡಲು ಸಾಧ್ಯ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...