ರಾಯಚೂರು | ಮದುವೆಗೆ ಪ್ರಿಯಕರನ ಮನೆಯವರ ವಿರೋಧ : ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

Date:

ಪ್ರೀತಿಸಿದ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಯುವತಿ ಮಹಿಳಾ ಸಾಂತ್ವನ ಕೇಂದ್ರದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.

ಅನುರಾಧಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ, ಘಟನೆಗೆ ಸಂಬಂಧಿಸಿದಂತೆ ರಾಯಚೂರು ಪಶ್ಚಿಮ ಪೊಲೀಸರು ಸಂತ್ರಸ್ತೆಯ ಪ್ರಿಯಕರ 24 ವರ್ಷದ ವಿನಯ ರೆಡ್ಡಿ ಎಂಬಾತನನ್ನು ಬಂಧಿಸಿದ್ದಾರೆ.

ಮೃತ ಅನುರಾಧಾ ಹಾಗೂ ವಿನಯ ರೆಡ್ಡಿ ಇಬ್ಬರೂ ನಗರದ ಜಲಾಲ್ ನಗರದವರು. ಒಂದುವರೆ ವರ್ಷದಿಂದ  ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ಕುಟುಂಬದವರು ಮದುವೆಗೆ ಒಪ್ಪಿದ್ದರು. ಆದರೆ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಒಂದೇ ಕಾರಣಕ್ಕೆ ಯುವಕನ ಮನೆಯವರು ಮದುವೆಗೆ ವಿರೋಧಿಸಿದ್ದರು. ತಮ್ಮ ಮದುವೆಗೆ ರಕ್ಷಣೆ ಕೋರಿ ಗುರುವಾರ ಪೊಲೀಸರ ಮೊರೆ ಹೋಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಯುವತಿಯ ಪೋಷಕರು ಮದುವೆಗೆ ಒಪ್ಪದ ಕಾರಣ, ಅದೇ ದಿನ ಪೊಲೀಸ್ ಠಾಣೆಯಿಂದ ಅನುರಾಧಾ ಅವರನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿತ್ತು. ನಂತರ ವಿನಯ್ ರೆಡ್ಡಿ ಮದುವೆಯಾಗಲು ನಿರಾಕರಿಸಿದ್ದರಿಂದ ಯುವತಿ ಕಟ್ಟಡದ ಮೇಲಿಂದ ಹಾರಿದಳು ಎನ್ನಲಾಗುತ್ತಿದೆ.

ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ತಕ್ಷಣ ರಿಮ್ಸ್‌ಗೆ ಕೊಂಡೊಯ್ಯಲಾಗಿತ್ತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಾಲಕಿ ಮೇಲೆ ಅತ್ಯಾಚಾರ; 60 ವರ್ಷದ ಕಾಮುಕನ ಬಂಧನ

ಯುವಕ ವಿನಯ ರೆಡ್ಡಿ ಹಾಗೂ ಅವರ ಕುಟುಂಬದವರು ನನ್ನ ಮಗಳಿಗೆ ಮೋಸ ಮಾಡಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂತ್ರಸ್ತೆಯ ಪೋಷಕರು ನೀಡಿದ ದೂರಿನ್ವಯ ರಾಯಚೂರು ಪಶ್ಚಿಮ ಪೊಲೀಸರು ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ಡೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...