ಹೆಣ್ಣು ಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

Date:

ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಕಾರಣ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಕೆಲವು ದುಷ್ಕರ್ಮಿಗಳು ಅವಾಚ್ಯವಾಗಿ ನಿಂದಿಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, “ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಹಾಕಿರುವ ಅವರು, “ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣು ಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ.
ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

“ಹೆಣ್ಣು ಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...