ಜಮ್ಮು ಕಾಶ್ಮೀರ ಉಗ್ರರ ದಾಳಿ: ಕನ್ನಡಿಗರ ಮೃತದೇಹಗಳು ಸಂಜೆ ರಾಜ್ಯಕ್ಕೆ ಆಗಮನ

Date:

ಕಾಶ್ಮೀರದ ಪಹಲ್ಲಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಮೃತದೇಹ ಬುಧವಾರ ಸಂಜೆ ರಾಜ್ಯಕ್ಕೆ ಆಗಮಿಸಲಿದೆ.

ಮಂಜುನಾಥ್ ರಾವ್ ಅವರ ಮೃತದೇಹ ಸಂಜೆ 6 ಗಂಟೆಗೆ ರಾಜ್ಯಕ್ಕೆ 6E 3103/ 6E 5269/ 6E 7731 ವಿಮಾನದ ಮೂಲಕ ತಲುಪಲಿದೆ. ಉಗ್ರರ ಗುಂಡೇಟಿಗೆ ಬಲಿಯಾದ ಮತ್ತೋರ್ವ ಕರ್ನಾಟಕದ ನಿವಾಸಿ ಭರತ್ ಭೂಷನ್ ಮೃತದೇಹವೂ, 6E 3105/ 6E 5252 ವಿಮಾನದಲ್ಲಿ ಮಧ್ಯಾಹ್ಮ 3 ಗಂಟೆಗೆ ಮುಂಬೈ ಮೂಲಕ ಬೆಂಗಳೂರಿಗೆ ತಲುಪಲಿದೆ.

ದಾಳಿಯಲ್ಲಿ ಮೃತಪಟ್ಟ ಮಧುಸೂದನ್ ರಾವ್ ಅವರು ಮೂಲತಃ ಅಂಧ್ರದವರಾಗಿದ್ದು ರಾಮಮೂರ್ತಿ ನಗರದಲ್ಲಿ ನೆಲೆಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಮೃತದೇಹ ಮಧ್ಯಾಹ್ಮ 3 ಗಂಟೆಗೆ 6E 3105/ 6E 5015 ವಿಮಾನದಲ್ಲಿ ಮುಂಬೈ ಮೂಲಕ ಚೆನೈ ತಲುಪಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಗೊಂಡವರ ಯೋಗ ಕ್ಷೇಮ ವಿಚಾರಿಸಿಲು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರ ಪಹಲ್ಲಾಮ್‌ಗೆ ತೆರಳಿದ್ದಾರೆ. ಆಸ್ಪತ್ರೆಗೆ ತೆರಳಿರುವ ಅವರು ಕನ್ನಡಿಗರಿಗನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

ಈ ನಡುವೆ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಹೆಲ್ಪ್‌ಲೈನ್ ಆರಂಭಿಸಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ Tour Operators & Travel Agents ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಕೆಳಕಂಡ ಸಹಾಯವಾಣಿಗೆ ನೀಡಬೇಕೆಂದು ಕೋರಿದೆ.

ಈ ನಡುವೆ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಹೆಲ್ಪ್‌ಲೈನ್ ಆರಂಭಿಸಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ Tour Operators & Travel Agents ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಕೆಳಕಂಡ ಸಹಾಯವಾಣಿಗೆ ನೀಡಬೇಕೆಂದು ಕೋರಿದೆ.

ಹೆಲ್ಪ್‌ಲೈನ್ ನಂಬರ್ ಹೀಗಿದೆ
080-43344334
080-43344335
080-43344336
080-43344342

ಪ್ರಧಾನಿ ಮೋದಿ ಭದ್ರತಾ ಸಭೆ
ಅತ್ತ ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಮರಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಉನನತ ಮಟ್ಟದ ಭದ್ರತಾ ಸಭೆ ನಡೆಸಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಈ ಉನ್ನತ ಮಟ್ಟದ ಭದ್ರತಾ ಸಮಿತಿ ಸಭೆಯಲ್ಲಿ, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಹಿರಿಯ ಭದ್ರತಾ ಸಲಹೆಗಾರರು ಹಾಗೂ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...