ಸಿಎಂ ಸೂಚನೆ ಮೇರೆಗೆ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ ರಾಜ್ಯದ ಅಧಿಕಾರಿಗಳ ತಂಡ

Date:

ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದು, ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ಉಗ್ರರ ದಾಳಿ ಬಗ್ಗೆ ತಿಳಿಯುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಮಂಗಳವಾರ ರಾತ್ರಿ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು. ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದರು. ಇದರ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಚೇತನ್ ನೇತೃತ್ವದ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ಕಳಿಸಿಕೊಡಲಾಗಿದೆ. ದೆಹಲಿ ಕರ್ನಾಟಕ ಭವನದ ಆಯುಕ್ತರನ್ನೂ ಅರ್ಲಟ್ ಮಾಡಲಾಗಿದೆ. ಜೊತೆಗೆ ಇಡೀ ಕಾರ್ಯಾಚರಣೆಯ ಜವಾಬ್ದಾರಿಯನ್ನು ಸಿಎಂ ಸಿದ್ದರಾಮಯ್ಯ, ಕಾರ್ಮಿಕ ಸಚಿವ ಸಂತೋಷ್ ಲಾಡ್​ಗೆ ವಹಿಸಿದ್ದಾರೆ.

ಸಿಎಂ ಸೂಚನೆ ಬೆನ್ನಲ್ಲೇ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿ ಅಲ್ಲಿಂದ ಕಾಶ್ಮೀರಕ್ಕೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ. ಕಾಶ್ಮೀರದ ಸ್ಥಳೀಯ ಆಡಳಿತ, ಭದ್ರತಾ ಪಡೆಗಳು ಮತ್ತು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿ ಇರಲಿದ್ದು, ಕನ್ನಡಿಗರಿಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯ, ಸುರಕ್ಷಿತ ಸ್ಥಳಾಂತರ ಮತ್ತು ಇತರ ಸಹಾಯವನ್ನು ಒದಗಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

ವಿಪರ್ಯಾಸ ಅಂದ್ರೆ ಲಾಡ್​ಗೆ ವಿಶೇಷ ವಿಮಾನ ಸಿಕ್ಕರೂ ಪೈಲಟ್ ಇಲ್ಲದೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಧ್ಯರಾತ್ರಿವರೆಗೂ ಪರದಾಡುವಂತಾಯಿತು.

ಉಗ್ರರ ದಾಳಿಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸರ್ಕಾರ ಕನ್ನಡಿಗರ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಂಡ ಬೆನ್ನಲ್ಲೇ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ ಅವರು, ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ ಎಂದು ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...