ಹಾಸನ ಪೆನ್‌ಡ್ರೈವ್‌ ಪ್ರಕರಣ | ದೇಶದಲ್ಲೇ ಅತೀ ದೊಡ್ಡ ಹಗರಣ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

Date:

ಹಾಸನ ಪೆನ್‌ಡ್ರೈವ್‌ ಪ್ರಕರಣವು ಈಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದು ದೇಶದಲ್ಲೇ ಅತೀ ದೊಡ್ಡ ಹಗರಣ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.

ಹಾಸನ ಸಂಸದ, ಲೋಕಸಭೆ ಚುನಾವಣೆಯ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ರಾಷ್ಟ್ರಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಆಯೋಗದ ಡಾ. ನಾಗಲಕ್ಷ್ಮೀ ಚೌಧರಿ, “ಎಸ್‌ಐಟಿ ತನ್ನ ತನಿಖೆಯನ್ನು ಪ್ರಾರಂಭಿಸಲಾಗಿದ್ದು ಈ ಎಸ್‌ಐಟಿ ತಂಡದಲ್ಲಿ ಅತ್ಯಂತ ದಕ್ಷ ಅಧಿಕಾರಿಗಳು ಇದ್ದಾರೆ” ಎಂದು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

“ಸಂತ್ರಸ್ತರ ರಕ್ಷಣೆಯ ಬಗ್ಗೆ ಚಿಂತಿಸುತ್ತಿದ್ದೇವೆ. ಸಂತ್ರಸ್ತರು ಮುಕ್ತವಾಗಿ ಬಂದು ದೂರು ದಾಖಲಿಸಬಹುದು,” ಎಂದು ತಿಳಿಸಿದ್ದಾರೆ.

“ನಮ್ಮ ಕಚೇರಿಗೆ ಲಭ್ಯವಾಗಿರುವ ಪೆನ್‌ಡ್ರೈವ್‌ನಲ್ಲಿ ನೂರಾರು ವಿಡಿಯೋಗಳಿವೆ. ನಾನು ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆಯುತ್ತೇನೆ. ನನ್ನ ಪ್ರಕಾರ ಇದು ಭಾರತದ ಅತ್ಯಂತ ದೊಡ್ಡ ಹಗರಣವಾಗಿದೆ” ಎಂದು ಅಭಿಪ್ರಾಯಿಸಿದ್ದಾರೆ.

ಇದನ್ನು ಓದಿದ್ದೀರಾ?  ಹಾಸನ ಪೆನ್‌ಡ್ರೈವ್‌ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಎಚ್‌.ಡಿ ಕುಮಾರಸ್ವಾಮಿ

ಇನ್ನು ಈ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಡಾ.ನಾಗಲಕ್ಷ್ಮೀ ಚೌಧರಿ ಅವರು, “ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಇರುವ ಪೆನ್ ಡ್ರೈವ್ ಮಹಿಳಾ ಆಯೋಗದ ಕಚೇರಿಗೂ ತಲುಪಿದೆ. ದೇಶವೇ ತಲೆ ತಗ್ಗಿಸುವ ಘಟನೆ ಇದು. ಹೆದರಿಸಿ, ನಂಬಿಸಿ ಈ ವೀಡಿಯೋ ಮಾಡಲಾಗಿದೆ. ದೂರು ದಾಖಲಾಗಿದೆ” ಎಂದು ತಿಳಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...