ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಎನ್‌ಐಎ ವಶಕ್ಕೆ

Date:

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ಎನ್‌ಐಎ ತಂಡ ಮೂವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಸುಳ್ಯದ ಮೊಹಮ್ಮದ್ ಮುಸ್ತಾಫ್ ಅಲಿಯಾಸ್ ಮುಸ್ತಾಫ್ ಪೈಚಾರು, ಸೋಮವಾರಪೇಟೆಯ ಇಲಿಯಾಸ್‌ ಹಾಗೂ ಸಿರಾಜ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಮೊಹಮ್ಮದ್ ಮುಸ್ತಾಫಾ ಹಾಗೂ ಇಲಿಯಾಸ್ ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದರು. ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್‌ನನ್ನು ವಶಕ್ಕೆ ಪಡೆಯಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿಯನ್ನು ಶುಕ್ರವಾರ (ಮೇ10) ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಿಂದ ಆಗಮಿಸಿದ ಎನ್ಐಎ ತಂಡ ಆನೆಮಹಲ್ ಗ್ರಾಮದಲ್ಲಿ ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಲಸ ಸಿಗದಿದ್ದಕ್ಕೆ ಪಿಜಿ ಮೇಲಿಂದ ಬಿದ್ದು ಪದವೀಧರ ಆತ್ಮಹತ್ಯೆ

ಏನಿದು ಪ್ರಕರಣ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು 2022ರ ಜುಲೈನಲ್ಲಿ ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ಪ್ರಕರಣ ಸಂಬಂಧ ಆರಂಭದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು.

ಕಳೆದ ವರ್ಷ ಜನವರಿಯಲ್ಲಿ ಎನ್‌ಐಎ 20 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಸಕಲೇಶಪುರದಿಂದ ಮುಸ್ತಾಫಾ ಪೈಚಾರುನನ್ನು ಎನ್‌ಐಎ ತಂಡ ವಶಕ್ಕೆ ಪಡೆದಿದೆ. ಇದಕ್ಕೂ ಮುನ್ನ ಆರೋಪಿ ಮುಸ್ತಾಫಾ ಪೈಚಾರು ಸುಳಿವು ನೀಡಿದವರಿಗೆ ಎನ್​ಐಎ ₹5 ಲಕ್ಷ ಬಹುಮಾನ ಫೋಷಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...