ಆಸ್ತಿ ತೆರಿಗೆ | ಶೇ 5.ರಷ್ಟು ರಿಯಾಯಿತಿ ಜುಲೈ ವರೆಗೆ ವಿಸ್ತರಣೆ ಮಾಡಿದ ಬಿಬಿಎಂಪಿ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇತ್ತೀಚಿನ ದಿನಗಳಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ನೀಡುತ್ತಿದೆ. ಎರಡು ತಿಂಗಳಿಗೆ ನೀಡುತ್ತಿದ್ದ ಈ ರಿಯಾಯಿತಿಯನ್ನು ಇದೀಗ ಜುಲೈ ಅಂತ್ಯದವರೆಗೂ ನೀಡಲಾಗಿದೆ. ಈ ವರ್ಷ ಶೇ.5ರಷ್ಟು ರಿಯಾಯಿತಿ ಜುಲೈ ಅಂತ್ಯದ ವರೆಗೆ ಜಾರಿಯಲ್ಲಿರಲಿದೆ.

ಈ ಬಗ್ಗೆ ಗುರುವಾರ ಸುತ್ತೋಲೆ ಹೊರಡಿಸಿರುವ ಬಿಬಿಎಂಪಿ, “ಮಾದರಿ ನೀತಿ ಸಂಹಿತೆ ಜಾರಿಯಾಗುವ ನಿರೀಕ್ಷೆ ಇದೆ. ರಿಯಾಯಿತಿಯು 2024 ರ ಜುಲೈ 31ರ ವರೆಗೆ ಇರುತ್ತದೆ” ಎಂದು ಮಾಹಿತಿ ನೀಡಿದೆ.

ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಪಾಲಿಕೆಯ ಆರ್ಥಿಕ ಹಿತದೃಷ್ಟಿಯಿಂದ 2024-25ನೇ ಸಾಲಿನಲ್ಲಿ ಆಸ್ತಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ.5 ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಮೇ 1 ರಿಂದ ಜುಲೈ 31 ರವರೆಗೆ ವಿಸ್ತರಿಸಿ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್ಥಿಕ ವರ್ಷದ ಪೂರ್ಣ ಆಸ್ತಿ ತೆರಿಗೆಯನ್ನು ಪಾವತಿಸಿದರೆ ಬಿಬಿಎಂಪಿ ಕಾಯ್ದೆ ಪ್ರಕಾರ ಏಪ್ರಿಲ್‌ 30ರವರೆಗೆ ಶೇ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಇದೀಗ, ಲೋಕಸಭಾ ಚುನಾವಣೆ ಘೋಷಣೆಯಾಗುವ ಹಿನ್ನೆಲೆ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ಚುನಾವಣೆ ಕಾರ್ಯದಲ್ಲಿ ತೊಡಗಿರುತ್ತಾರೆ. ಹೀಗಾಗಿ, ಶೇ.5 ರಷ್ಟು ರಿಯಾಯಿತಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ” ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟ ಕಾಡಂಚಿನಲ್ಲಿ ಮಹಿಳೆಯ ಅಂಗಾಂಗ ಪತ್ತೆ

2024-25ನೇ ಸಾಲಿಗೆ ₹3,800 ಕೋಟಿ ಆಸ್ತಿ ತೆರಿಗೆ ಸಂಗ್ರಹದ ಗುರಿಯನ್ನು ಬಿಬಿಎಂಪಿ ಹಾಕಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...