ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು

Date:

“ವಿರೋಧ ಪಕ್ಷದ ಒಬ್ಬೊಬ್ಬ ನಾಯಕನನ್ನು ಒಂದೊಂದು ನೆಪದಲ್ಲಿ ಜೈಲಿಗೆ ಕಳುಹಿಸುವ ಕಷ್ಟವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ. ಅವರಿಗೆ ಸುಲಭವಾಗಲಿ ಎಂಬ ನಿಟ್ಟಿನಲ್ಲಿ ಪಕ್ಷದ ಎಲ್ಲ ಮುಖಂಡರು ಒಟ್ಟಾಗಿ ಬಂದಿದ್ದೇವೆ. ಧೈರ್ಯವಿದ್ದರೆ ನಮ್ಮೆಲ್ಲರನ್ನು ಒಟ್ಟಿಗೆ ಜೈಲಿಗೆ ಹಾಕಿ” ಎಂದು ಆಮ್‌ ಆದ್ಮಿ ಪಾರ್ಟಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಅವರು ಸವಾಲು ಹಾಕಿದರು.

ಎಎಪಿ ಮುಗಿಸಲು ಯತ್ನಿಸುತ್ತಿರುವ ಪ್ರಧಾನಿ ಮೋದಿ ನಿರಂಕುಶ ಪ್ರಭುತ್ವವನ್ನು ವಿರೋಧಿಸಿ ದೆಹಲಿ ಬಿಜೆಪಿ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕುವ ಪ್ರತಿಭಟನೆಯಲ್ಲಿ ರಾಜ್ಯ ಘಟಕದ ಮುಖಂಡರು ಹಾಗೂ ಕಾರ್ಯಕರ್ತರ ನೇತೃತ್ವ ವಹಿಸಿದ್ದ ಪೃಥ್ವಿ ರೆಡ್ಡಿ, “ಎಎಪಿ ರಾಜಕೀಯ ಪಕ್ಷ ಮಾತ್ರವಲ್ಲ ಒಂದು ಪ್ರಬುದ್ಧ ವಿಚಾರ. ಆ ವಿಚಾರವನ್ನು ಎಂದಿಗೂ ಮುಗಿಸಲು ಸಾಧ್ಯವಿಲ್ಲ. ನಮ್ಮನ್ನು ಜೈಲಿನಲ್ಲಿಡಬಹುದು, ನಮ್ಮ ಬ್ಯಾಂಕ್‌ ಖಾತೆಗಳನ್ನು ತಡೆಹಿಡಿಯಬಹುದು, ಕಚೇರಿಯಿಂದ ಹೊರ ಹಾಕಬಹುದು. ಆದರೆ, ಅರವಿಂದ ಕೇಜ್ರಿವಾಲ್‌ ಅವರು ಹುಟ್ಟುಹಾಕಿರುವ ವಿಚಾರವನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಕಾರಣ ಈಗಾಗಲೇ ಭಾರತೀಯರ ಮನಸ್ಸಿನಲ್ಲಿ ಕೇಜ್ರಿವಾಲ್‌ ವಿಚಾರಗಳು ನಾಟಿವೆ” ಎಂದರು.

“ದೇಶದ ಮತದಾರರು ನಮ್ಮ ಸರ್ಕಾರದ ಅಭಿವೃದ್ಧಿ ಪರ ಕೆಲಸಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇದನ್ನು ಸಹಿಸದ ಪ್ರಧಾನಿ ನರೇಂದ್ರ ಮೋದಿ ನಮ್ಮ ಪಕ್ಷವನ್ನು ಮುಗಿಸಲು ಕಳೆದ ಕೆಲವು ತಿಂಗಳಿಂದ ಹರಸಾಹಸ ಪಡುತ್ತಿದ್ದಾರೆ. ಕೆಲಸದ ವಿಚಾರದಲ್ಲಿ ನಮ್ಮ ಜೊತೆ ಸ್ಪರ್ಧಿಸಲು ಧೈರ್ಯವಿಲ್ಲದ ಮೋದಿ ವಾಮಮಾರ್ಗ ಹಿಡಿದಿದ್ದಾರೆ. ಮೂರು ರೀತಿಯಲ್ಲಿ ನಮ್ಮ ಪಕ್ಷವನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಮೊದಲನೆಯದಾಗಿ ನಮ್ಮ ಎಲ್ಲ ಪ್ರಮುಖ ನಾಯಕರನ್ನು ಜೈಲಿಗೆ ಕಳುಹಿಸುತ್ತಿದ್ದಾರೆ. ಎರಡನೇ ತಂತ್ರವಾಗಿ ನಮ್ಮ ಪಕ್ಷದ ಬ್ಯಾಂಕ್‌ ಅಕೌಂಟ್‌ ಫ್ರೀಜ್‌ ಮಾಡುವ ಪ್ರಯತ್ನ ನಡೆಸಿದ್ದಾರೆ. ಮೂರನೆಯದಾಗಿ ದೆಹಲಿಯ ಪ್ರಧಾನ ಕಚೇರಿಯಿಂದ ನಮ್ಮನ್ನು ಹೊರಹಾಕುವ ಸಂಚು ಹೂಡಿದ್ದಾರೆ. ಆದರೆ, ಈ ಯಾವ ಪ್ರಯತ್ನಗಳು ಕೈಗೂಡುವುದಿಲ್ಲ” ಎಂದು ಪೃಥ್ವಿ ರೆಡ್ಡಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಸ್ಲಿಮರನ್ನು ಗುರಿಯಾಗಿರಿಸಿ ದ್ವೇಷ ಹುಟ್ಟು ಹಾಕುವುದಕ್ಕೆ ಕಡಿವಾಣ ಹಾಕಿ: ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ಆಗ್ರಹ

ಈ ಸಂದರ್ಭ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ರಾಜ್ಯ ಕಾರ್ಯದರ್ಶಿ ಉಷಾ ಮೋಹನ್‌, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, ಅಶೋಕ್‌ ಮೃತ್ಯುಂಜಯ, ಸಂಚಿತ್‌ ಸೆಹವಾನಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...