ಹೂ, ಕೇಕ್, ಸಿಹಿ ಪಕ್ಕಕ್ಕಿಡಿ, ಅದೇ ಹಣವನ್ನು ಅನಾಥಾಶ್ರಮಕ್ಕೆ ನೀಡಿ: ಹೊಸ ವರ್ಷಕ್ಕೆ ನಗರ ಕಮಿಷನರ್​ ಮಾದರಿ ನಡೆ

Date:

ಹೆಚ್ಚಿನ ಜನ ಮದ್ಯ ಸೇವಿಸಿ, ಕೇಕ್ ಕತ್ತರಿಸಿ, ಪಾರ್ಟಿ ಮಾಡಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದರೆ, ಬೆಂಗಳೂರು ನಗರ ಪೊಲೀಸ್ ಕಮಿಷನರ್​ ಬಿ.ದಯಾನಂದ್ ಅವರು, ಅದೇ ಹಣವನ್ನು ಅನಾಥಾಶ್ರಮಕ್ಕೆ ನೀಡಿ ಮಾದರಿಯಾಗಿದ್ದಾರೆ. ತಮ್ಮ ಕಿರಿಯ ಅಧಿಕಾರಿಗಳಿಗೂ ಇದನ್ನು ಪಾಲಿಸುವಂತೆ ಸೂಚನೆ ನೀಡಿದ್ದಾರೆ.

ಹೊಸ ವರ್ಷ ಮತ್ತು ಕೆಲ ವಿಶೇಷ ದಿನಗಳಲ್ಲಿ ಹಿರಿಯ ಅಧಿಕಾರಿಗಳಿಗೆ ಕಿರಿಯ ಅಧಿಕಾರಿಗಳು ಹೂ ಗುಚ್ಛ, ಸಿಹಿ ತಿನಿಸು ನೀಡಿ ಶುಭಾಶಯ ಕೋರುವುದು ವಾಡಿಕೆ. ಆದರೆ ಈ ಬಾರಿ ಹೊಸ ವರ್ಷಕ್ಕೆ ಶುಭಾಶಯ ಹೇಳಲು ಬರುವ ಕಿರಿಯ ಅಧಿಕಾರಿಗಳು ಬೊಕ್ಕೆ, ಸಿಹಿ ತಿನಿಸು ತರದೆ ಆ ಹಣವನ್ನ ಅನಾಥಾಶ್ರಮಕ್ಕೆ ನೀಡಿ ಅಂತ ನಗರ ಪೊಲೀಸ್ ಆಯುಕ್ತ ದಯಾನಂದ್ ಸೂಚಿಸಿದ್ದಾರೆ. ಎಸಿಪಿ ಮತ್ತು ಇನ್ಸ್‌ಪೆಕ್ಟರ್ ಹಂತದ ಅಧಿಕಾರಿಗಳ ವರ್ಚ್ಯುಯಲ್ ಮೀಟಿಂಗ್​ನಲ್ಲಿ ಕಮಿಷನರ್ ದಯಾನಂದ್ ಈ​ ಸಲಹೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರಿಗಳು ಹೂ ಗುಚ್ಛ ಮತ್ತು ಸಿಹಿ ತಿನಿಸಿಗಾಗಿ ಸಾವಿರಾರು ರೂಪಾಯಿ ಖರ್ಚು ಮಾಡುತ್ತಾರೆ. ಕೆಲವೇ ಗಂಟೆಗಳಲ್ಲಿ ಹೂ ಗುಚ್ಛ ವ್ಯರ್ಥವಾಗುತ್ತೆ. ಇದರಿಂದ ಯಾರಿಗೂ ಉಪಯೋಗವಿಲ್ಲ. ಹೀಗಾಗಿ ಆ ಹಣವನ್ನು ನಿಮ್ಮ ವ್ಯಾಪ್ತಿಯ ಅನಾಥಾಶ್ರಮಳಿಗೆ ದಿನಸಿ, ಸಿಹಿತಿನಿಸು ಅಥವಾ ಊಟಕ್ಕೆ ವ್ಯಯಿಸಿ ಎಂದು ಸಲಹೆ ನೀಡಿದ್ದಾರೆ.

ಇನ್ನು ಅನಾಥಾಶ್ರಮಗಳಿಗೆ ಸಹಾಯ ಮಾಡಿದ ಆ ಫೋಟೋವನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಿ. ಫೋಟೋ ಹಂಚಿಕೊಳ್ಳುವುದರಿಂದ ನೀವು ಮತ್ತೊಬ್ಬರಿಗೂ ಮಾದರಿಯಾಗುತ್ತೀರಾ ಎಂದು ಸಲಹೆ ನೀಡಿದ್ದಾರೆ. ಸದ್ಯ ನಗರ ಪೊಲೀಸ್ ಆಯುಕ್ತರು, ತಾವು ಹೇಳಿದ ರೀತಿ ಮಾಡಿ, ಟ್ವಿಟರ್ ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದು, ಮತ್ತೊಬ್ಬರಿಗೆ ಮಾದರಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು...