ನ.19 ಕ್ಕೆ ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮಿಸುವ ಸಾಧ್ಯತೆ

Date:

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಸಂಘರ್ಷ ಒಳಗೊಂಡ ಮುಂತಾದ ಚಟುವಟಿಕೆಗಳ ಮಧ್ಯೆ ನವೆಂಬರ್‌ನಲ್ಲಿ ಕರ್ನಾಟಕಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಗಮಿಸಲಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ನಂತರ ಸತೀಶ್‌ ಜಾರಕಿಹೊಳಿ ಉತ್ತರಾಧಿಕಾರಿ ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ ನಂತರ ಈಗ ರಾಜ್ಯ ರಾಜಕೀಯದಲ್ಲಿ ವಿವಿಧ ನಾಯಕರಿಂದ ಬಣ ರಾಜಕೀಯ ಶುರುವಾಗಿದೆ.

ಯತೀಂದ್ರ ಸಿದ್ದರಾಮಯ್ಯ ಈ ಹಿಂದೆ ಸಿದ್ದರಾಮಯ್ಯನವರು 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಬೆಳಗಾವಿಯಲ್ಲಿ ಮಾತನಾಡುತ್ತಾ ತಂದೆಯವರು ರಾಜಕೀಯ ಸಂಧ್ಯಾಕಾಲದಲ್ಲಿದ್ದು, ಸತೀಶ್‌ ಜಾರಕಿಹೊಳಿ ಅವರು ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಸತೀಶ್​ ಜಾರಕಿಹೊಳಿ, “ನಾನು ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದು ಹೇಳಲ್ಲ. ಅದನ್ನು ಜನರು ಮತ್ತು ಪಕ್ಷ ಹೇಳಬೇಕು. ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ನಲ್ಲಿ ಅರಸು, ನಂತರ ಬಂಗಾರಪ್ಪ ಬಳಿಕ ಸಿದ್ದರಾಮಯ್ಯ ಇದ್ದಾರೆ. ಅವರ ಬಳಿಕ ಯಾರೆಂದು ಮುಂದೆ ಉತ್ತರ ಸಿಗುತ್ತದೆ. ಆದರೆ 2028ಕ್ಕೆ ಕ್ಲೈಮ್ ಮಾಡೋದ್ರಲ್ಲಿ ನಾನೂ ಇದೀನಿ” ಎನ್ನುವ ಮೂಲಕ ಕುತೂಹಲ ಸೃಷ್ಟಿಸಿದ್ದಾರೆ.

ಪಥಸಂಚಲನ ಪಾಲಿಟಿಕ್ಸ್‌ | ಕಲಬುರಗಿಯಲ್ಲಿ ನಡೆಯುವುದೇ RSS-DSS ನೇರ ಹಣಾಹಣಿ?

ಗೃಹ ಸಚಿವ ಡಾ ಜಿ ಪರಮೇಶ್ವರ್​ ಈ ಬಗ್ಗೆ ಮಾತನಾಡಿ, “ಸಿದ್ದರಾಮಯ್ಯರು ಅಹಿಂದ ಪ್ರಾರಂಭಿಸಿದಾಗ ಸತೀಶ್​ ಜಾರಕಿಹೊಳಿಯವರು ಪ್ರಮುಖ ಪಾತ್ರ ವಹಿಸಿದ್ದರು. ಆ ಹಿನ್ನೆಲೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಅವರ ಹೆಸರು ಹೇಳಿದರೆ ತಪ್ಪೇನಿದೆ?” ಎಂದಿದ್ದಾರೆ.

ಹಾಗೆಯೇ ಅಬಕಾರಿ ಸಚಿವ ಆರ್‌ ಬಿ ತಿಮ್ಮಾಪುರ, “ಯತೀಂದ್ರ ಹೇಳಿರುವ ನಾಯಕತ್ವ ಸತೀಶ್​ ಜಾರಕಿಹೊಳಿ ಅವರಲ್ಲಿದೆ. ಒಂದಲ್ಲ ಒಂದು ದಿನ ಅವರು ಸಿಎಂ ಆಗುತ್ತಾರೆ. ಎಲ್ಲರನ್ನೂ ಜೊತೆಗೆ ತೆಗೆದುಕೊಂಡು, ಸಿಎಂ ಸಿದ್ದರಾಮಯ್ಯನವರ ದಾರಿಯಲ್ಲೇ ಸತೀಶ್​ ಸಾಗುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಸಿಎಂ ಆಗುವ ಎಲ್ಲ ಅರ್ಹತೆ ಸತೀಶ್ ಜಾರಕಿಹೊಳಿ ಅವರಿಗಿದೆ. ಆದರೆ, ನಮ್ಮ‌ಲ್ಲಿ ಈಗ ಸಿಎಂ ಕುರ್ಚಿ ಖಾಲಿ ಇಲ್ಲ. ಯತೀಂದ್ರ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಅನ್ನೋದನ್ನು ಗಮನಿಸಬೇಕು. ಸಿದ್ದರಾಮಯ್ಯಗೆ ಕೊನೆ ಚುನಾವಣೆ ಆಗಿರಬಹುದು. ಮುಂದೆಯೂ ಅವರ ನಾಯಕತ್ವ ಅಗತ್ಯವಿದೆ. ಸಿದ್ದರಾಮಯ್ಯ ಅವರನ್ನು ಬಿಟ್ಟು ಚುನಾವಣೆ ಮಾಡೋಕೆ ಆಗಲ್ಲ” ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...