ರಾಯಚೂರು | ಕಾಮುಕರ ಅಟ್ಟಹಾಸಕ್ಕೆ ಮಹಿಳೆ ಬಲಿ

Date:

ಮಹಿಳೆಯೊಬ್ಬರ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿ, ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬೆಂದಿದೆ.

ಸಿಂಧನೂರಿನ ಏಳಮೈಲ್‌ ಕ್ಯಾಂಪಿನಲ್ಲಿ ವಾಸಿಸುತ್ತಿದ್ದ ಮಹಿಳೆ ಕಾಮುಕರ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ನಾಲ್ವರು ಕಾಮುಕ ಆರೋಪಿಗಳ ಪೈಕಿ, ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಾಳಪ್ಪ ಮತ್ತು ಮೂವರು ಕಾಮುಕರು ಮೇ 24ರಂದು ನಾಲ್ಕುಮೈಲ್‌ ಕ್ಯಾಂಪಿನ ಹೊರವಲಯದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅವರಿಂದ ತಪ್ಪಿಸಿಕೊಳ್ಳಲು ಮಹಿಳೆ ಯತ್ನಿಸಿದ್ದು, ಆಕೆಯ ಮೇಲೆ ನಾಲ್ವರೂ ಮನಸೋಯಿಚ್ಛೆ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಸ್ಪತ್ರೆಯಲ್ಲಿ ಪೊಲೀಸರಿಗೆ ಹೇಳಿಕೆ ನೀಡಿದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಧನೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್‌

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಮಹಿಳೆಯರ ವಿರುದ್ಧ ಸೈಬರ್ ಕ್ರೈಮ್: ಐದು ವರ್ಷಗಳಲ್ಲಿ ದುಪ್ಪಟ್ಟು

ಮಹಿಳೆಯರ ವಿರುದ್ಧದ ಸೈಬರ್ ಕ್ರೈಮ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ದುಪಟ್ಟಾಗಿದೆ....

ಅಮಾನತುಗೊಂಡಿದ್ದ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಈ ಹಿಂದೆ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿದ್ದ...