ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆ : 5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್​’

Date:

ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಐದು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ, ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ವಾತಾವರಣವಿರಲಿದೆ.

ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಉಷ್ಣ ಅಲೆ ಇರುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 42.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಶೂನ್ಯ ಮಳೆ ದಾಖಲು

ಬೆಂಗಳೂರಿನಲ್ಲಿ ಕಳೆದ ಮೂರು ವರ್ಷಗಳಲ್ಲಿಯೇ ಶೂನ್ಯ ಮಳೆ ದಾಖಲಾಗಿದೆ. ಫೆಬ್ರವರಿಯಲ್ಲಿ 7.1ಮಿ.ಮೀ ಹಾಗೂ ಮಾರ್ಚ್‌ನಲ್ಲಿ 14.7ಮಿ.ಮೀ ಮಳೆಯಾಗಬೇಕಿತ್ತು. ಆದರೆ, ಈ ಬಾರಿ ಎರಡು ತಿಂಗಳಿನಲ್ಲಿ ಮಳೆಯೇ ಆಗಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಡಿಕೆಯ ಪ್ರಕಾರ ಏಪ್ರಿಲ್‌ನಲ್ಲಿ 61.7 ಮೀ ಮಳೆಯಾಗಬೇಕಿತ್ತು. ಆದರೆ, ಬೆಂಗಳೂರಿನಲ್ಲಿ ಏಪ್ರಿಲ್ ಮಧ್ಯದವರೆಗೆ ಮಳೆಯಾಗಿಲ್ಲ. ಅಲ್ಲದೇ, ಅಂತ್ಯದವರೆಗೂ ಮಳೆಯ ಸುಳಿವಿಲ್ಲ ಎನ್ನಲಾಗಿದೆ

ಬೆಂಗಳೂರಿನಲ್ಲಿ ಮತ್ತೆ ಎರಡು ಡಿಗ್ರಿ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಔಷಧ ಘಟಕದಲ್ಲಿ ರಿಯಾಕ್ಟರ್ ಸ್ಫೋಟ; 7 ಮಂದಿ ಸಾವು

ಎಚ್​ಎಎಲ್​ನಲ್ಲಿ 36.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 38.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...