ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Date:

ತಾಪಮಾನ ಹೆಚ್ಚಳದಿಂದ ತತ್ತರಿಸಿರುವ ಜನಕ್ಕೆ ಸಂತಸದ ಸುದ್ದಿಯೊಂದು ಹೊರಬಿದ್ದಿದ್ದು, ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಬಹುತೇಕ ಕಡೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಏಪ್ರಿಲ್‌ ಆರಂಭದಿಂದಲೂ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್​ 8ರ ಬಳಿಕ ಮಳೆಯಾಗಲಿದೆ. ಏಪ್ರಿಲ್ 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್​ 8 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್​ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಇಂದಿನಿಂದ ಒಂದು ವರ್ಷಗಳ ಕಾಲ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬಂದ್

ದಾವಣಗೆರೆ ಜಿಲ್ಲೆಯಲ್ಲಿ ಬುಧವಾರ ವರ್ಷದ ಮೊದಲ ಮಳೆಯಾಗಿದೆ. ಸುಮಾರು 45 ನಿಮಿಷ ಸುರಿದ ಮಳೆಗೆ ಜನರು ಹರ್ಷ ವ್ಯಕ್ತಪಡಿಸಿದ್ದಾರೆ.

ಮುಂದಿನ 3 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...