ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಮಿಶ್ರ ವಾತಾವರಣ ಇರಲಿದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27°C (81°F) ಮತ್ತು ಕನಿಷ್ಠ ತಾಪಮಾನ 18°C (64°F) ಇರಲಿದೆ ಎಂದು ಹೇಳಲಾಗಿದೆ. ಕರಾವಳಿ ಕರ್ನಾಟಕ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಹಾಗೂ ಮಂಗಳೂರು ಮತ್ತು ಉಡುಪಿ ನಗರದಲ್ಲಿ ಬೆಚ್ಚಗಿನ, ಚಳಿ ಹೆಚ್ಚಿರಲಿದೆ.
ಇನ್ನು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿ ಒಣ ಹವಾಮಾನ ಮುಂದುವರಿಯಲಿದೆ. ಕಲಬುರಗಿ, ಬೀದರ್ ಮತ್ತು ಬಾಗಲಕೋಟೆಯಲ್ಲಿ ಸಾಮಾನ್ಯ ಚಳಿ ಇದ್ದು, ಗರಿಷ್ಠ 29°C ಮತ್ತು ರಾತ್ರಿ ಇದರ ತಾಪಮಾನ ಕಡಿಮೆ ಇರುತ್ತದೆ. ದಾವಣಗೆರೆ,ಚಿತ್ರದುರ್ಗ, ಮತ್ತು ಬಳ್ಳಾರಿ ಇಂದು ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ಮುಂದಿನ 3 ದಿನಗಳಲ್ಲಿ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಚಳಿ ಮುಂದುವರಿಯುವ ನಿರೀಕ್ಷೆಯಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಕ ವಸ್ತು ಉತ್ಪಾದನೆಗಿಳಿದ ಹೊರರಾಜ್ಯ ಮಾಫಿಯಾ ಗ್ಯಾಂಗ್; ಕರ್ನಾಟಕದ ಕಳಂಕ!
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಕೊಡಗು, ವಿಜಯನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಬೀದರ್, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಗದಗ, ಕಲಬುರಗಿ, ಧಾರವಾಡ, ಕೊಪ್ಪಳ, ಬಳ್ಳಾರಿ, ರಾಯಚೂರಿನಲ್ಲಿ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಹೇಳಿದೆ. ಸಂಕ್ರಾಂತಿ ಸಮಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.





