ಮಳೆ | ರಾಜ್ಯದ ಹಲವೆಡೆ ಯೆಲ್ಲೊ ಅಲರ್ಟ್‌ ಘೋಷಣೆ, ಇನ್ನೂ ಒಂದು ವಾರ ಗುಡುಗು ಸಹಿತ ಮಳೆ

Date:

ಪೂರ್ವ ಮಧ್ಯ ಅರೇಬಿಯನ್‌ ಸಮುದ್ರ ಮತ್ತು ಉತ್ತರ ಲಕ್ಷ ದ್ವೀಪ ಪ್ರದೇಶದ ಮೇಲೆ ಬೀಸಿದ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾನುವಾರ ಹಾಗೂ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಅಕ್ಟೋಬರ್‌ 19 ರಂದು ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ.

ಅಕ್ಟೋಬರ್ 21 ಮತ್ತು 22ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿಯ ಎಲ್ಲ ಜಿಲ್ಲೆಗಳಿಗೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರಾವಳಿ ಹಾಗೂ ಒಳನಾಡಿನ ಹಲವೆಡೆ ಶನಿವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ತೀವ್ರತೆ ಭಾನುವಾರ ಹೆಚ್ಚುವ ಸಂಭವವಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಚಂಡಮಾರುತದ ವಾತಾವರಣ ಇರಲಿದೆ. ಮೀನುಗಾರರು ಎಚ್ಚರವಹಿಸಬೇಕು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಮಳೆ ಸುರಿದಷ್ಟು ಅಧಿಕಾರಸ್ಥರ ಜೇಬಲ್ಲಿ ಹಣದ ಹೊಳೆ; ಬೆಂಗಳೂರು ನಿವಾಸಿಗಳಿಗೆ ತಪ್ಪದ ನರಕ!

ಬೆಂಗಳೂರಿನಲ್ಲಿ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಶುಕ್ರವಾರ ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿಯಲ್ಲಿ 15 ಸೆಂ.ಮೀ., ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ9 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 8 ಸೆಂ.ಮೀ., ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ6 ಸೆಂ.ಮೀ., ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ 4 ಸೆಂ.ಮೀ. ಮಳೆಯಾಗಿದೆ.

ಧಾರವಾಡ ನಗರ ಹಾಗೂ ಗ್ರಾಮೀಣ ಭಾಗದ ಹಲವು ಕಡೆಗಳಲ್ಲಿ ದಿನವಿಡೀ ಆಗಾಗ ರಭಸದ ಮಳೆ ಸುರಿದಿದೆ. ಜಿಲ್ಲೆಯಲ್ಲಿಅ.1ರಿಂದ 16ರ ವರೆಗೆ 67 ಮಿ.ಮೀ ವಾಡಿಕೆಗಿಂತ 139 ಮಿಮೀ ಹೆಚ್ಚು ಮಳೆಯಾಗಿದೆ.

ಧಾರವಾಡದಲ್ಲಿ ದಿನ ಪೂರ್ತಿ ಹಗರು ಮಳೆ ಸುರಿದಿದ್ದರಿಂದ ತಗ್ಗು ಪ್ರದೇಶದಲ್ಲಿನೀರು ನುಗ್ಗಿತ್ತು. ಅಲ್ಲದೇ ಮಾರುಕಟ್ಟೆ ಪ್ರದೇಶದಲ್ಲೂಕಡಿಮೆ ಜನರ ಓಡಾಟ ಕಂಡುಬಂತು. ಗ್ರಾಮೀಣ ಭಾಗದಲ್ಲಿಯೂ ರಭಸದ ಮಳೆ ಸುರಿದಿದ್ದರಿಂದ ಬೆಣ್ಣೆಹಳ್ಳ, ತುಪ್ಪರಿಹಳ್ಳ ಒಂದು ವಾರದಿಂದ ತುಂಬಿ ಹರಿಯುತ್ತಿವೆ.

ಪ್ರಮುಖವಾಗಿ ಧಾರವಾಡ ತಾಲೂಕಿನಲ್ಲಿ ಹೆಚ್ಚಿನ ಮಳೆ ಸುರಿದಿದ್ದು, ಉಪ್ಪಿನ ಬೆಟಗೇರಿ ಸುತ್ತಲಿನ ಪ್ರದೇಶದಲ್ಲಿಮಳೆ ನೀರು ನುಗ್ಗಿ ರಸ್ತೆಗಳು ಜಲಾವೃತವಾಗಿದ್ದವು. ನಗರದ ಪ್ರದೇಶದಲ್ಲಿಯೂ ಇದೇ ಪರಸ್ಥಿತಿ ಇತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...