ರಾಮೇಶ್ವರಂ ಕೆಫೆ | ಸ್ಪೋಟಕ್ಕೆ ಬಳಸಿದ್ದ ಕೆಮಿಕಲ್ಸ್ ಪತ್ತೆ

Date:

ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳ ಪರಿಶೀಲನೆ ಮುಂದುವರೆಸಿದ ಅಧಿಕಾರಿಗಳಿಗೆ ಇದೀಗ, ಟೈಮರ್‌ ಫಿಕ್ಸ್‌ ಮಾಡಿ ಸ್ಪೋಟಿಸುವುದಕ್ಕೆ ಬಳಸಿದ್ದ ರಾಸಾಯನಿಕ ಪತ್ತೆಯಾಗಿದೆ ಎನ್ನಲಾಗಿದೆ. ಈ ಹಿಂದೆ ಸ್ಫೋಟಗೊಂಡ ಸ್ಥಳದಲ್ಲಿ ಪೊಲೀಸರಿಗೆ ಬ್ಯಾಟರಿ ಮತ್ತು ಟೈಮರ್ ಪತ್ತೆಯಾಗಿತ್ತು.

ಟೈಮರ್‌ ಫಿಕ್ಸ್‌ ಮಾಡಿ ಸ್ಪೋಟ ಮಾಡಲು ಪೊಟ್ಯಾಷಿಯಂ ನೈಟ್ರೇಟ್ ಮತ್ತು ಹೈಡ್ರೋಜನ್ ಪರಾಕ್ಸೈಡ್ ಬಳಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಸ್ಫೋಟದ ಅವಶೇಷಗಳ ಮಾದರಿಗಳನ್ನು ಎಫ್ಎಸ್​ಎಲ್ ಮತ್ತು ಸೋಕೋ ತಂಡ ಸಂಗ್ರಹಿಸಿದೆ.

ಬಾಂಬ್​ಗೆ ಟೈಮರ್ ಫಿಕ್ಸ್ ಮಾಡಿ ಬ್ಯಾಗಿನ ಒಳಗೆ ಇಟ್ಟು ಸ್ಫೋಟಿಸಲಾಗಿದೆ ಎಂಬ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಕಕಾಲಕ್ಕೆ ಎರಡು ಬಾಂಬ್​ ಸ್ಫೋಟಿಸಲು ಆರೋಪಿ ಯೋಜಿಸಿದ್ದನು ಎಂದು ತಿಳಿದುಬಂದಿದೆ. ಟೈಮರ್​ ಫಿಕ್ಸ್​ ಮಾಡುವಾಗ 5 ಸೆಕೆಂಡ್​ ಅಂತರದ ಬಗ್ಗೆ ಗೊತ್ತಿಲ್ಲದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಎಫ್‌ಎಸ್‌ಎಲ್‌ ವರದಿಯಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ.

ಒಂದು ವೇಳೆ 2 ಬಾಂಬ್ ಸ್ಫೋಟಗೊಂಡಿದ್ದರೆ ಕಟ್ಟಡವೇ ನೆಲಸಮ ಆಗುವುದರೊಂದಿಗೆ ಸಾವು-ನೋವು ಹೆಚ್ಚಾಗುವ ಸಾಧ್ಯತೆ ಇತ್ತು ಎಂಬ ಆಂಶ ವರದಿಯಲ್ಲಿ ಬಹಿರಂಗವಾಗಿದೆ. ಇತ್ತ ಆರೋಪಿಗಾಗಿ ತೋವ್ರ ಶೋಧ ಮುಂದುವರೆಸಿರುವ ಪೊಲೀಸರು ಎಂಟು ತಂಡ ಮಾಡಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ನಾಲ್ವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು, ಆಡುಗೋಡಿ ಟೆಕ್ನಿಕಲ್​ ಸೆಲ್​ಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೃಷಿ ಹೊಂಡದಲ್ಲಿ ಬಿದ್ದ ಮಗಳ ರಕ್ಷಣೆಗೆ ಧಾವಿಸಿದ ದಂಪತಿ; ಒಂದೇ ಕುಟುಂಬದ ಮೂವರು ಸಾವು

ಅಪರಾಧ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ, ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್ ಅವರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ದಿ ರಾಮೇಶ್ವರಂ ಕೆಫೆ ಹಾಗೂ ಅಕ್ಕ-ಪಕ್ಕದ ಮಳಿಗೆಗಳು, ಐಟಿಪಿಎಲ್ ಮುಖ್ಯರಸ್ತೆ, ಕುಂದಲಹಳ್ಳಿ ಹಾಗೂ ಸುತ್ತಮುತ್ತಲಿನ ಸ್ಥಳಗಳಲ್ಲಿರುವ 400ಕ್ಕೂ ಹೆಚ್ಚು ಕ್ಯಾಮೆರಾಗಳ ಡಿವಿಆರ್‌ಗಳನ್ನು ಸುಪರ್ದಿಗೆ ಪಡೆದು, ಎಲ್ಲ ವಿಡಿಯೊ ವೀಕ್ಷಿಸಲಾಗುತ್ತಿದೆ. ಶಂಕಿತ ಓಡಾಡಿದ್ದ ಕೆಲ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...