ಜೈಲುಗಳಲ್ಲಿರುವ ಆದಿವಾಸಿಗಳ ಸ್ಥಿತಿಗತಿ ಅಧ್ಯಯನಕ್ಕೆ ಸಮಿತಿ ರಚನೆಗೆ ಶಿಫಾರಸು: ಅರಣ್ಯ ಹಕ್ಕು ಕಾಯ್ದೆ ಸಮರ್ಪಕ ಜಾರಿಗೆ ಆಗ್ರಹ

Date:

ರಾಜ್ಯದ ವಿವಿಧ ಜೈಲುಗಳಲ್ಲಿರುವ ಆದಿವಾಸಿಗಳ ವಾಸ್ತವಿಕ ಸ್ಥಿತಿಗತಿಯನ್ನು ಪರಿಶೀಲಿಸಲು ತಕ್ಷಣವೇ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಬೇಕು ಹಾಗೂ ಅವರ ಬಿಡುಗಡೆಗೆ ಜಾಮೀನು ಮತ್ತು ನ್ಯಾಯಯುತ ವಿಚಾರಣೆಗೆ ಸೂಕ್ತ ಏರ್ಪಾಡು ಮಾಡಬೇಕು ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಸಮಿತಿಯು ಸರ್ಕಾರಕ್ಕೆ ಮಹತ್ವದ ಶಿಫಾರಸು ಮಾಡಿದೆ.

​ಆದಿವಾಸಿಗಳು ಮತ್ತು ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ ಕುರಿತಂತೆ ವರದಿಯಲ್ಲಿ ವಿಶೇಷವಾಗಿ ಪ್ರಸ್ತಾಪಿಸಲಾಗಿದ್ದು, ಅರಣ್ಯ ಹಕ್ಕುಗಳ ಕಾಯ್ದೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಹಾಗೂ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

​ನ್ಯಾಯಯುತ ವಿಚಾರಣೆ ಮತ್ತು ಜಾಮೀನು ವ್ಯವಸ್ಥೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಣ್ಣಪುಟ್ಟ ಪ್ರಕರಣಗಳಲ್ಲಿ ಮತ್ತು ಅರಣ್ಯ ಒತ್ತುವರಿ ನೆಪದಲ್ಲಿ ಅನೇಕ ಆದಿವಾಸಿಗಳು ಸುದೀರ್ಘ ಕಾಲದಿಂದ ಜೈಲುಗಳಲ್ಲಿ ದಿನದೂಡುತ್ತಿದ್ದಾರೆ. ಸರಿಯಾದ ಕಾನೂನು ನೆರವು ಸಿಗದೆ, ಜಾಮೀನು ಪಡೆಯಲು ಆರ್ಥಿಕ ಚೈತನ್ಯವಿಲ್ಲದೆ ಅವರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಜೈಲುಗಳಲ್ಲಿರುವ ಆದಿವಾಸಿಗಳ ಸ್ಥಿತಿಗತಿಯನ್ನು ಅರಿಯಲು ತಜ್ಞರ ಸಮಿತಿಯೊಂದನ್ನು ನೇಮಿಸುವುದು ಅತ್ಯಗತ್ಯ. ಜೊತೆಗೆ, ಅವರಿಗೆ ಉಚಿತ ಕಾನೂನು ನೆರವು ಒದಗಿಸಿ, ತ್ವರಿತಗತಿಯಲ್ಲಿ ನ್ಯಾಯಯುತ ವಿಚಾರಣೆ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ಜಾಮೀನು ಮಂಜೂರಾತಿಗೆ ಅಗತ್ಯ ಬೆಂಬಲ ನೀಡುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ.

​ಬಲಾತ್ಕಾರದ ತೆರವು ಕಾರ್ಯಾಚರಣೆಗೆ ತಡೆ

ಅರಣ್ಯ ಸಂರಕ್ಷಣೆಯ ಹೆಸರಿನಲ್ಲಿ ಮೂಲ ನಿವಾಸಿಗಳಾದ ಆದಿವಾಸಿಗಳನ್ನು ಅವರ ಪಾರಂಪರಿಕ ನೆಲೆಗಳಿಂದ ಬಲಾತ್ಕಾರವಾಗಿ ಒಕ್ಕಲೆಬ್ಬಿಸುತ್ತಿರುವ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಉಪಸಮಿತಿ ಸರ್ಕಾರಕ್ಕೆ ಕಟ್ಟುನಿಟ್ಟಿನ ಸಲಹೆ ನೀಡಿದೆ. ಆದಿವಾಸಿಗಳು ಕಾಡಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಅವರ ತೆರವು ಕ್ರಮವು ಅವರ ಬದುಕು ಮತ್ತು ಸಂಸ್ಕೃತಿಯ ಮೇಲಿನ ಆಕ್ರಮಣವಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಬಲವಂತದ ಒಕ್ಕಲೆಬ್ಬಿಸುವಿಕೆ ಹಾಗೂ ಒತ್ತುವರಿ ತೆರವು ನೆಪದಲ್ಲಿ ದೌರ್ಜನ್ಯ ನಡೆಯಬಾರದು ಎಂದು ಆಗ್ರಹಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಗಳಲ್ಲಿ ದ್ವೇಷಕ್ಕೆ ಭಾರತೀಯರ ಬಲಿ- ಕೈಕಟ್ಟಿ ಕುಳಿತಿರುವರೇ ‘ವಿಶ್ವಗುರು’?

​ಮೂಲಭೂತ ಸೌಲಭ್ಯಗಳ ಕಲ್ಪನೆಗೆ ಒತ್ತು

ಆದಿವಾಸಿಗಳು ತಲತಲಾಂತರದಿಂದ ವಾಸಿಸುತ್ತಿರುವ ನೆಲೆಗಳಲ್ಲಿ (ಹಾಡಿಗಳಲ್ಲಿ) ಕನಿಷ್ಠ ಮೂಲಭೂತ ಸೌಲಭ್ಯಗಳ ಕೊರತೆ ಇಂದಿಗೂ ಎದ್ದುಕಾಣುತ್ತಿದೆ. ಈ ಹಿನ್ನೆಲೆಯಲ್ಲಿ, ಅವರ ವಾಸಸ್ಥಾನಗಳಿಗೆ ಶುದ್ಧ ಕುಡಿಯುವ ನೀರು, ವಿದ್ಯುತ್, ರಸ್ತೆ ಸಂಪರ್ಕ, ಆರೋಗ್ಯ ಕೇಂದ್ರಗಳು ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಆದ್ಯತೆ ಮೇರೆಗೆ ಯೋಜನೆ ರೂಪಿಸಬೇಕು. ಅರಣ್ಯ ಹಕ್ಕುಗಳ ಕಾಯ್ದೆಯಡಿ ಅವರಿಗೆ ಸಿಗಬೇಕಾದ ಜಮೀನಿನ ಹಕ್ಕುಪತ್ರಗಳನ್ನು ವಿಳಂಬವಿಲ್ಲದೆ ವಿತರಿಸಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

​ಕಾಡಿನ ಮಕ್ಕಳಾದ ಆದಿವಾಸಿಗಳಿಗೆ ಸಾಂವಿಧಾನಿಕವಾಗಿ ಸಿಗಬೇಕಾದ ಹಕ್ಕುಗಳನ್ನು ಖಚಿತಪಡಿಸುವ ಹಾಗೂ ಅವರನ್ನು ದೌರ್ಜನ್ಯ ಮುಕ್ತರನ್ನಾಗಿಸಿ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಮುಂಬರುವ ಬಜೆಟ್‌ನಲ್ಲಿ ಸರ್ಕಾರ ದಿಟ್ಟ ಹೆಜ್ಜೆ ಇಡಬೇಕು ಎಂಬುದು ಆಯೋಗದ ಪ್ರಮುಖ ಆಶಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...