ರೇಣುಕಾಸ್ವಾಮಿ‌ ಕೊಲೆ ಪ್ರಕರಣ; ಸರ್ಕಾರಿ ಅಭಿಯೋಜಕರ ಬದಲಾವಣೆ ಪ್ರಸ್ತಾಪವಿಲ್ಲ: ಗೃಹ ಸಚಿವ ಪರಮೇಶ್ವರ್

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರ ಬದಲಾವಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು‌.

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಸ್‌ಪಿಪಿ ಬದಲಾವಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದು ನನ್ನ ಗಮನಕ್ಕೆ ಬಂದಿಲ್ಲ. ಬದಲಾವಣೆ ಮಾಡಿದರೂ ಅದರಲ್ಲೇನೂ ತಪ್ಪಿಲ್ಲ. ಕಾರಣ ಇಟ್ಟುಕೊಂಡೇ ತೀರ್ಮಾನ ತೆಗೆದುಕೊಳ್ಳಲಾಗಿರುತ್ತದೆ” ಎಂದು ಸ್ಪಷ್ಟಪಡಿಸಿದರು.

“ಕಾನೂನು ಸಲಹೆಗಾರರು ಏನೆಲ್ಲ ಸಲಹೆಗಳನ್ನು ನೀಡುತ್ತಾರೋ ಅದರ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಎಲ್ಲರು ‌ಸ್ಟ್ರಿಕ್ಟ್ ಆಗಿಯೇ ಇರಬೇಕಲ್ಲವೇ? ಕಾನೂನು ಬಿಟ್ಟು ಯಾರು ಕೆಲಸ ಮಾಡಲಾಗುವುದಿಲ್ಲ. ಕಾನೂನು ಪ್ರಕಾರವೇ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಕೆಲಸ ಮಾಡಬೇಕು. ಯಾರನ್ನೇ ನೇಮಿಸಿದರು ಸಹ ಕಾನೂನು ಪುಸ್ತಕ ಒಂದೇ ಅಲ್ಲವೇ? ಅದರ ಪ್ರಕಾರವೇ ಕೆಲಸ ಮಾಡಬೇಕಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೇಣುಕಾಸ್ವಾಮಿ‌ ಕೊಲೆ ಪ್ರಕರಣವನ್ನು ಸಡಿಲ ಮಾಡುವಂತಹ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ಮುಲಾಜಿಲ್ಲದೇ, ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೇ ಪ್ರಕರಣದ ತನಿಖೆ ನಡೆಯುತ್ತಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾಯಿಸುವ ಸಂದರ್ಭ ಬಂದರೆ ಕಾರಣ ಇರುತ್ತದೆ. ಇಲ್ಲದೇ ಮಾಡುವುದಿಲ್ಲ‌” ಎಂದು ಹೇಳಿದರು‌.

“ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣವನ್ನು ಪೊಲೀಸರು ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣವನ್ನು ತನಿಖೆ ಮಾಡಬೇಕಾಗುತ್ತದೆ ಅನ್ನಿಸಿದರೆ ತೀರ್ಮಾನ ಮಾಡುತ್ತಾರೆ‌. ಸರ್ಕಾರದ ಅನುಮತಿ ಬೇಕಾದರೆ ನೀಡಲಾಗುವುದು” ಎಂದು ತಿಳಿಸಿದರು.

“ಶ್ರೀಧರ್ ಎಂಬುವನ ಆತ್ಮಹತ್ಯೆ ಪ್ರಕಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ದರ್ಶನ್ ಪ್ರಕರಣಕ್ಕೂ ಶ್ರೀಧರ್ ಎಂಬುವರ ಆತ್ಮಹತ್ಯೆಗೂ ಸಂಬಂಧ ಇದ್ದರೆ ತನಿಖೆ ಮಾಡುತ್ತಾರೆ. ಪ್ರತ್ಯೇಕವಾಗಿ ತನಿಖೆ ನಡೆಸಬೇಕು ಅಂತ ಸರ್ಕಾರವನ್ನು ಕೇಳುತ್ತಾರೆ. ಕಾರಣಗಳನ್ನು ಆಧರಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಮರುತನಿಖೆ ನಡೆಸಲು ಅನುಮತಿ ಕೇಳಿದರೆ ನೀಡಲಾಗುವುದು” ಎಂದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯವರು ರಸ್ತೆ ತಡೆ, ಸಿಎಂ ಅವರಿಗೆ ಘೇರಾವ್ ಹಾಕಲು ನಿರ್ಧರಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಇದಕ್ಕೆ ಏನೇನು ಕ್ರಮ ಕೈಗೊಳ್ಳಬೇಕು ತೆಗೆದುಕೊಳ್ಳುತ್ತೇವೆ. ರಸ್ತೆ ತಡೆ ನಡೆಸಲು ಕೆಲವು ಸಲ ಪೊಲೀಸರು ಅರ್ಧ ಗಂಟೆ ಅನುಮತಿ ಕೊಡುತ್ತಾರೆ. ಆ ರೀತಿ ಅನುಮತಿ ಕೊಟ್ಟಿದ್ದರೆ ಸಮಂಜಸವಾಗಿರುತ್ತದೆ. ರಸ್ತೆ ತಡೆ ನಡೆಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಅದರ ಹಿನ್ನೆಲೆಯಲ್ಲಿ ಏನೆಲ್ಲ ಕ್ರಮ ತೆಗೆದುಕೊಳ್ಳುತ್ತೇವೆ” ಎಂದರು.

“ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ತೀರ್ಮಾನ ಮಾಡಿ, ಈಗಾಗಲೇ ಪ್ರಕಟಣೆ ಹೊರಡಿಸಿದೆ. ಜನ ಹಣ ಪಾವತಿಸುತ್ತಿದ್ದಾರೆ. ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇರುವುದರಿಂದ ಪಕ್ಕದ ರಾಜ್ಯದವರು ಸಹ ಇಲ್ಲಿಗೆ ಬಂದು ತೆಗೆದುಕೊಂಡು ಹೋಗುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವ ಪ್ರಶ್ನೆ ಬರುವುದಿಲ್ಲ” ಎಂದು ಹೇಳಿದರು‌.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...