ಸಂಪ್‌ನಿಂದ ಮಗು ರಕ್ಷಣೆ | ‘ಮಗುವಿನ ಅಳು ಕೇಳಿ ನಿರಾಳನಾದೆ’ ಎಂದ ಪೊಲೀಸ್ ಅಧಿಕಾರಿಯ ಅಂತಃಕರಣಕ್ಕೆ ಮೆಚ್ಚುಗೆಯ ಮಹಾಪೂರ

Date:

ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಧಾವಿಸಿ ಸಂಪ್‌ನಲ್ಲಿ ಮುಳುಗಿದ್ದ 2 ವರ್ಷ 6 ತಿಂಗಳ ಮಗುವಿನ ರಕ್ಷಿಸುವಲ್ಲಿ ಪಿಎಸ್ಐಯೊಬ್ಬರು ಸಫಲರಾಗಿದ್ದಾರೆ.

ಬೆಂಗಳೂರು ನಗರದ ಬ್ಯಾಡರಹಳ್ಳಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜ ಎ ಆರ್ ಎಂಬುವರು ಮಗುವಿನ ಜೀವ ಉಳಿಸಿದ್ದು, ಅವರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಪೊಲೀಸ್‌ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಾಗರಾಜ ಅವರ ಈ ಸಾಹಸವನ್ನು ಶ್ಲಾಘಿಸಿದ್ದಾರೆ.

ಮಗುವಿನ ರಕ್ಷಣೆ ಮಾಡಿದ ಪಿಎಸ್ಐ ನಾಗರಾಜ ಅವರು ಈ ದಿನ.ಕಾಮ್‌ ಜೊತೆ ಮಾತನಾಡಿ, “ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಕರ್ತವ್ಯಕ್ಕೆ ಅದೇ ಮಾರ್ಗದಲ್ಲಿ ತೆರಳುತ್ತಿದ್ದೆ. ಮನೆಯ ಆವರಣದಲ್ಲಿ ಮಹಿಳೆಯರು ‘ಮಗು ಕಾಪಾಡಿ..’ ಎಂದು ಕೂಗುತ್ತಿದ್ದರು. ನಾನೇನೋ ಹಾವು ಕಡಿದಿರಬಹುದು ಎಂದುಕೊಂಡು ಕೂಡಲೇ ಅಲ್ಲಿಗೆ ಹೋದೆ. ಮಗು ನೀರಿನಲ್ಲಿ ಬಿದ್ದಿರುವುದು ಗೊತ್ತಾಯಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರಿದು, “ಮಗು ಬಿದ್ದ ಸಂಪ್‌ 10 ಅಡಿ ಆಳ ಇತ್ತು. ಅದರಲ್ಲಿ ಐದು ಅಡಿ ನೀರು ಇತ್ತು. ಮಗು ಬಿದ್ದು 2-3 ನಿಮಿಷ ಆಗಿರಬಹುದು. ಹಿಂದೆ ಮುಂದೆ ಯೋಚಿಸದೇ ಸಂಪ್‌ನೊಳಗೆ ಇಳಿದೆ. ನೋಡಿದ್ರೆ ಮಗು ಮೂಲೆಯಲ್ಲಿ ಇತ್ತು. ಮಗುವನ್ನು ಮೇಲೆ ಎತ್ತಿಕೊಟ್ಟೆ. ಅಷ್ಟೊತ್ತಿಗಾಗಲೇ ಮಗು ನೀರು ಕುಡಿದು ಚೂರು ಹೊಟ್ಟೆ ಉಬ್ಬಿದಂತೆ ಕಂಡಿತು. ಮಗುವಿನ ಹೊಟ್ಟೆ ಒತ್ತಿದರೆ ಪ್ರಾಣಕ್ಕೆ ತೊಂದರೆ ಆಗಬಹುದು ಎಂದು ಅರಿತು ಮೀನಿನ ತರ ಮಲಗಿಸಿ ಸ್ವಲ್ಪ ಸ್ವಲ್ಪ ಬೆನ್ನು ಒತ್ತಿ ನೀರು ತೆಗೆದೆ. ಅರ್ಧ ಲೀಟರ್‌ ನೀರು ಹೊರಗೆ ಬಂತು. ಕೂಡಲೇ ಆಸ್ಪತ್ರೆಗೆ ಕಳುಹಿಸಿಕೊಟ್ಟೆವು. ಆಸ್ಪತ್ರೆಯಲ್ಲಿ ಮಗುವಿನ ಅಳು ಕೇಳಿ ನಿರಾಳನಾದೆ” ಎಂದು ತಮ್ಮ ಅನುಭವ ಹಂಚಿಕೊಂಡರು.

ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಪಾಯದಿಂದ ಪಾರಾಗಿದೆ, ಬುಧವಾರ ಸಂಜೆಯೇ ಮಗುವನ್ನು ಪಾಲಕರು ಮನೆಗೆ ಕರೆದೊಯ್ದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು...