ವಸತಿ ಶಾಲೆ ಬಾಲಕಿ ಆತ್ಮಹತ್ಯೆ ಪ್ರಕರಣ | ವಸತಿ ಶಾಲೆಯ ಮಕ್ಕಳಿಗೆ ಕೌನ್ಸಲಿಂಗ್: ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ಮಾಡಿ ಸಾಂತ್ವನ ಹೇಳಿದರು.

ಬಾಲಕಿ ಆತ್ಮಹತ್ಯೆಗೆ ದುಃಖ ವ್ಯಕ್ತಪಡಿಸಿದ ಸಚಿವರು, “ವಸತಿ ಶಾಲೆಯ ಮಕ್ಕಳಿಗೆ ಆಪ್ತಸಮಾಲೋಚನೆ ನಡೆಸಲಾಗುವುದು” ಎಂದರು. ಇಂತಹ ಸಂಕಷ್ಟದ ಸಂದರ್ಭದಲ್ಲಿ ತಾವು ಕುಟುಂಬದ ಜೊತೆಗೆ ಇರುವುದಾಗಿ ಭರವಸೆ ನೀಡಿದ ಸಚಿವರು ಕಾಂಗ್ರೆಸ್ ಪಕ್ಷದ ವತಿಯಿಂದ ರೂ. 1 ಲಕ್ಷ ಪರಿಹಾರದ ಹಣವನ್ನು ಪೋಷಕರಿಗೆ ನೀಡಿದರು.

ಈ ಸಂದರ್ಭದಲ್ಲಿ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಮೂದ್ ಸಾಹೇಬ್, ಭೀಮಣ್ಣ ಸಾಲಿ, ಶಿವಾನಂದ ಪಾಟೀಲ, ತಹಸೀಲ್ದಾರ ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

ರಸ್ತೆ ಅಪಘಾತ; ಪರಿಹಾರ ವಿತರಣೆ

ಕಳೆದ ನವೆಂಬರ್ ತಿಂಗಳಲ್ಲಿ ಹಲಕಟ್ಟಾ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದ ಆರು ಜನರ ವಾರಸುದಾರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಪರಿಹಾರದ ಚೆಕ್ ವಿತರಿಸಿದರು.

ನಾಲವಾರದ ಅವರ ಮನೆಗೆ ಭೇಟಿ ನೀಡಿದ ಸಚಿವರು, ಮೃತ ಆರು ಮಂದಿಯ ವಾರಸುದಾರರಿಗೆ ತಲಾ ರೂ 2 ಲಕ್ಷದ ಪರಿಹಾರದ ಚೆಕ್ ನ್ನು ವಿತರಿಸಿದರು.

ನಾಲವಾರ ಗ್ರಾಮದ ನಿವಾಸಿಗಳಾದ ನಜ್ಮಿನ್ ಬೇಗಂ (28), ಬೀಬಿ ಫಾತಿಮಾ(12), ಅಬೂಬಕ್ಕರ್(4), ಬೀಬಿ ಮರಿಯಮ್( 3 ತಿಂಗಳು), ಮುಹಮ್ಮ ದ್ ಪಾಷಾ, 20) ಹಾಗೂ ಆಟೋ ಚಾಲಕ ಬಾಬಾ(35) ಸ್ಥಳದಲ್ಲಿಯೇ ಮೃತಪಟ್ಟಿದ್ದು, 10 ವರ್ಷದ ಬಾಲಕ ಮಹಮ್ಮದ್ ಹುಸೇನ್ ಗಂಭೀರ ಗಾಯಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...