ಸಕಾಲ ಮಿಷನ್ | ರಾಜ್ಯದಲ್ಲಿ ಪ್ರಥಮ ಬಾರಿಗೆ ಎಸ್‌ಎಂಎಸ್‌ ಮೂಲಕ ಮೇಲ್ಮನವಿ ಸಲ್ಲಿಸುವ ಅವಕಾಶ

Date:

ಸಕಾಲ ಯೋಜನೆಯಡಿ ದಿನದಿಂದ ದಿನಕ್ಕೆ ಅರ್ಜಿ ಸಲ್ಲಿಕೆ ಮಾಡುವವರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ, ಜನರಿಗೆ ಅನುಕೂಲವಾಗಲು ಸಕಾಲ ಮಿಷನ್ ಹೊಸ ಯೋಜನೆಗಳನ್ನು ಸೇರ್ಪಡೆಗೊಳಿಸುತ್ತಿದೆ. ಇದೀಗ, ನಾಗರಿಕರು ಸಲ್ಲಿಸುವ ಅರ್ಜಿಗಳು ತಿರಸ್ಕ್ರತಗೊಂಡರೆ, ಅಂತಹವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಲಿಂಕ್ ಕಳುಹಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ ಸಕಾಲ ಮಿಷನ್‌ ಹೆಚ್ಚುವರಿ ಯೋಜನಾ ನಿರ್ದೇಶಕಿ ಪಲ್ಲವಿ ಆಕುರಾತಿ, “ಸಕಾಲ ಮಿಷನ್ ರಾಜ್ಯದಲ್ಲಿ ಪ್ರಥಮ ಬಾರಿಗೆ ಎಸ್‌ಎಂಎಸ್‌ ಮೂಲಕ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ತಿರಸ್ಕೃತಗೊಂಡ ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ವಯಂಚಾಲಿತವಾಗಿ ಸಕ್ಷಮ ಪ್ರಾಧಿಕಾರಿಗೆ ಪ್ರಥಮ ಮೇಲ್ಮನವಿಯನ್ನು ಎಸ್ಎಂಎಸ್ಮೂಲಕ ಕಳುಹಿಸುವ ಸೇವೆಯನ್ನು ಸೆಪ್ಟೆಂಬರ್ತಿಂಗಳಿನಿಂದ ಜಾರಿಗೊಳಿಸಲಾಗಿದೆಎಂದಿದ್ದಾರೆ.

“ನಾಗರಿಕರು ಅವಕಾಶವನ್ನು ಪರಿಣಾಮಕಾರಿಯಾಗಿ ಹಾಗೂ ಸುಲಭವಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವ ಉದ್ದೇಶದಿಂದ ಅಪೀಲು ಹಾಕಲು ಲಿಂಕ್ನ್ನು ಎಸ್ಎಂಎಸ್ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಇದುವರೆಗೆ ಒಟ್ಟು 3,18,420 ಎಸ್‌ಎಂಎಸ್‌ ಕಳುಹಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾರಿಗೆ ಇಲಾಖೆಯಲ್ಲಿ ಅರ್ಜಿಗಳ ಮಾಹಿತಿಯನ್ನು ಸಕಾಲ ತಂತ್ರಾಂಶಕ್ಕೆ ಮ್ಯಾನುಯಲ್ಆಗಿ ಪುಶ್ಮಾಡಲಾಗುತ್ತಿದ್ದು, ಇದನ್ನುಟೋಪುಷ್ಗೆ ಬದಲಾಯಿಸಲಾಗಿದೆ. ಹಾಗಾಗಿ, ಸಕಾಲದಲ್ಲಿ ಬಾಕಿ ಇದ್ದ ಅರ್ಜಿಗಳ ಸಂಖ್ಯೆಯು ಗಣನೀಯವಾಗಿ ಇಳಿಕೆಗೊಂಡಿದೆ. 9,691 ರಿಂದ 2,682 ಗಳಿಗೆ ಸಂಖ್ಯೆ ಇಳಿಕೆಯಾಗಿದೆ” ಎಂದು ತಿಳಿಸಿದ್ದಾರೆ.

“ಕಳೆದ ಮೂರು ತಿಂಗಳ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ಇಲಾಖೆಯಿಂದ ಅಸ್ತಿತ್ವದಲ್ಲಿರುವ ದೂರ ಸಂಪರ್ಕ ಮೂಲಸೌಕರ್ಯ, ಗೋಪುರಕ್ಕೆ ಅನುಮತಿ, ನಿಯಮಿತಗೊಳಿಸುವಿಕೆ, ಹೊಸ, ಅಸ್ತಿತ್ವದಲ್ಲಿರುವ ಓವರ್ಗ್ರೌಂಡ್ಕೇಬಲ್ಮೂಲಸೌಕರ್ಯ, ಭೂಗತ ಕೇಬಲ್ಮೂಲಸೌಕರ್ಯಕ್ಕಾಗಿ ಅನುಮತಿ, ನಿಯಮಿತಗೊಳಿಸುವಿಕೆಗಳಿಗೆ ಆನ್ಲೈನ್ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದ್ದಾರೆ.

“ಅಲ್ಪ ಸಂಖ್ಯಾತರ ಇಲಾಖೆಯಿಂದ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ ಯೋಜನೆ, ಎಂಫಿಲ್ ಮತ್ತು ಪಿಹೆಚ್ಡಿ ಫೆಲೋಶಿಪ್ಯೋಜನೆ ಹಾಗೂ ಐಐಟಿ, ಐಐಎಂ, ಐಐಎಸ್ಸಿ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಯೋಜನೆಗಳನ್ನು ಸಹ ಸಕಾಲದ ಅಡಿಯಲ್ಲಿ ಆನ್ಲೈನ್ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ” ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

“ಮಾಹಿತಿ ತಂತ್ರಜ್ಞಾನ ಇಲಾಖೆಯಿಂದ ಸ್ಟಾರ್ಟ್ಅಪ್ನೋಂದಣಿ ಮತ್ತು ಗೃಹ ಇಲಾಖೆಯಿಂದ ಬಾಡಿಗೆದಾರರ ಪೂರ್ವಾಪರ ಪರಿಶೀಲನೆ ಸೇರಿದಂತೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಉದ್ಯೋಗಾಕಾಂಕ್ಷಿಯ ನೋಂದಣಿ ದಾಖಲೆಯ ವರ್ಗಾವಣೆ, ಉದ್ಯೋಗಾಕಾಂಕ್ಷಿಗಳ ನೋಂದಣಿ, ಉದ್ಯೋಗಾಕಾಂಕ್ಷಿಗಳ ಮರು ನೋಂದಣಿ ಹಾಗೂ ಉದ್ಯೋಗಾಕಾಂಕ್ಷಿಗಳ ನೋಂದಣಿ ಪತ್ರದ ನವೀಕರಣ ಯೋಜನೆಗಳನ್ನು ಸಹ ಸಕಾಲ ವ್ಯಾಪ್ತಿಗೆ ತರಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...