ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಆರ್‌ಎಸ್‌ಎಸ್ ಎರಡು ಬಾರಿ ಬ್ಯಾನ್‌ ಮಾಡಿದ್ರು : ಸಚಿವ ಸಂತೋಷ ಲಾಡ್

Date:

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗೃಹಮಂತ್ರಿಗಳಾಗಿದ್ದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರು ಆರ್‌ಎಸ್‌ಎಸ್ ಎರಡು ಬಾರಿ ಬ್ಯಾನ್‌ ಮಾಡಿದ್ದರು. ಇದನ್ನು ಬಿಜೆಪಿಯವರು ಮರೆತಿದ್ದಾರೆ ಅನ್ಸತ್ತೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಬೀದರ್‌ನಲ್ಲಿ ಕಾರ್ಮಿಕ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಯೊಂದಿಗೆ ಈ ಮೇಲಿನಂತೆ ಉತ್ತರಿಸಿದರು.

ದೇಶ ಪ್ರೀತಿಸುವರೆಲ್ಲರೂ ಆರ್‌ಎಸ್‌ಎಸ್ ಪ್ರೀತಿಸುತ್ತಾರೆ ಎಂಬ ಪೋಸ್ಟರ್‌ ಅಂಟಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ʼ ʼಬಿಜೆಪಿ ಅವರು ಏನಾದರು ಅಂಟಿಸಲಿ, ಆರ್‌ಎಸ್‌ಎಸ್ ನಲ್ಲಿ ಇದ್ದವರಷ್ಟೇ ದೇಶಪ್ರೇಮಿಗಳಲ್ಲ, ದೇಶದಲ್ಲಿರುವ ಪ್ರತಿಯೊಬ್ಬ ಭಾರತೀಯ ಪ್ರಜೆಗಳಲ್ಲೂ ದೇಶಪ್ರೇಮ ಇದೆ. ಆರ್‌ಎಸ್‌ಎಸ್‌ನವರಿಗೆ ಹೆಚ್ಚಿನ ದೇಶಪ್ರೇಮ ಇರುವುದಿಲ್ಲʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ವರ್ಷವೂ ಸಚಿವರಿಗೆ ಡಿನ್ನರ್‌ ಕರೆಯುತ್ತಾರೆ. ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಸಿಎಂ ಅವರು ಮಾತನಾಡಿಲ್ಲ. ಒಂದು ವೇಳೆ ಸಚಿವ ಸಂಪುಟ ಪುನರ್‌ ರಚಿಸಬೇಕಾದರೆ ಮುಖ್ಯಮಂತ್ರಿಗಳಿಗೆ ಪೂರ್ಣ ಅಧಿಕಾರ ಇದೆ. ಹೈಕಮಾಂಡ್‌ ತೀರ್ಮಾನಿಸುವುದೇ ಅಂತಿಮವಾಗುತ್ತದೆʼ ಎಂದರು.

ಪ್ರಧಾನಿ ಮೋದಿಯವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಹಿಡಿದುಕೊಂಡು ಎಲ್ಲೆಡೆ ಓಡಾಡುತ್ತಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲೂ ನಮ್ಮ ಗ್ಯಾರಂಟಿಗಳನ್ನೇ ಬಳಸುತ್ತಿದ್ದಾರೆ. ಬಿಹಾರ ಚುನಾವಣೆಯಲ್ಲಿ ಮಹಿಳೆಯರಿಗೆ ಒಂದು ಮತಕ್ಕೆ ಬಿಜೆಪಿಯವರು ₹10 ಸಾವಿರ ಕೊಡುತ್ತಿದ್ದಾರೆʼ ಎಂದು ತಿಳಿಸಿದರು

ನವೆಂಬರ್‌ನಲ್ಲಿ ಕ್ರಾಂತಿಯಾಗುತ್ತದೆ ಎಂದು ಬಿಜೆಪಿ ಹೇಳಿಕೆ ವಿಚಾರ ಪ್ರಸ್ತಾಪಿಸಿದ ಅವರು, ʼಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಪ್ರಧಾನಿ ಆಗುತ್ತಾರೆ. ಇದರೊಂದಿಗೆ ನವೆಂಬರ್‌ ಕ್ರಾಂತಿ ಆಗಲಿದೆ.ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿರುವ ನಿತಿನ್‌ ಗಡ್ಕರಿ ಪ್ರಧಾನಿ ಆಗುವ ಸಾಧ್ಯತೆ ಇರುವ ವಿಷಯದ ಕುರಿತು ನಮಗೂ ಕುತೂಹಲ ಇದೆʼ ಎಂದರು.

ಇದನ್ನೂ ಓದಿ : ನಿಮ್ಮ ಮಕ್ಕಳು ಆರ್‌ಎಸ್‌ಎಸ್‌ಗೆ ಹೋಗ್ತಾರಾ? ಎಚ್ಚರ, ಈ ಕೃತಿಗಳು ಹೇಳುವ ಸತ್ಯಗಳೇ ಬೇರೆ!

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಮ್ ಖಾನ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...