ಮೇ 21 ರಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ

Date:

ಮೇ 21ರಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್​ನಲ್ಲಿ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಬಿಡುಗಡೆ ಮಾಡಲಿದೆ. ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ಜಾಲತಾಣದಲ್ಲಿ ನೋಡಬಹುದಾಗಿದೆ.

ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ಹಂಚಿಕೊಂಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಏ.29ರಿಂದ ಮೇ 16ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಗೆ 1,9,300 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಲಿತಾಂಶ ಮೇ 21ರ ಮಧ್ಯಾಹ್ನ 3 ಗಂಟೆಗೆ ವೆಬೈಸೈಟನ್‌ನಲ್ಲಿ https;//karresults.nic.in ಪ್ರಕಟವಾಗಲಿದೆ.

ಈಗಾಗಲೇ, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದರೆ, ಮೊದಲ ಹಂತದಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಇಂದು ಬಿಡುಗಡೆಯಾಗಲಿದೆ. ದ್ವಿತೀಯ ಪಿಯುಸಿ 2ರ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯಗೊಂಡಿದೆ.

ಈ ಸುದ್ದಿ ಓದಿದ್ದೀರಾ? ಪ್ರತಿಭಟನೆಗೆ ಮಣಿದ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ: ವಾಹನಗಳ ಪ್ರವೇಶ ಶುಲ್ಕ ರದ್ದು

ಈ ವರ್ಷದಿಂದಲೇ 3 ಬಾರಿ ಪರೀಕ್ಷೆ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ.

ಫಲಿತಾಂಶ ನೋಡುವುದು ಹೇಗೆ?

karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ, ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ ನಂತರ ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ. ಬಳಿಕ ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶ ಸ್ಕ್ರೀನ್​​ ಮೇಲೆ ಕಾಣಿಸುತ್ತದೆ. ಈಗ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...