ದ್ವಿತೀಯ ಪಿಯುಸಿ | ಪರೀಕ್ಷಾ ಅವಧಿಯಲ್ಲಿ ಬಿಎಂಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ

Date:

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರವರೆಗೆ ನಡೆಯಲಿವೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಮನೆಯಿಂದ ಪರೀಕ್ಷಾ ಕೇಂದ್ರಗಳವರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಂಸ್ಥೆ, “ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ, ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ” ಎಂದು ಹೇಳಿದೆ.

“ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸೌಲಭ್ಯಗಳನ್ನು ನೀಡಲಾಗಿದೆ. ದ್ವಿತೀಯ ಪಿಯುಸಿಯ ಎಲ್ಲ ವಿದ್ಯಾರ್ಥಿಗಳಿಗೆ ಮಾರ್ಚ್‌ 1 ರಿಂದ ಮಾರ್ಚ್‌ 22ರವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಬಸ್‌ಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು” ಎಂದಿದೆ.

ಈ ಸುದ್ದಿ ಓದಿದ್ದೀರಾ? ಎಸ್ಎಸ್ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

“ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು, ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...