ಹಿರಿಯ ಪತ್ರಕರ್ತ ಕೆ ಎಸ್ ಸಚ್ಚಿದಾನಂದಮೂರ್ತಿ ನಿಧನ

Date:

ಹಿರಿಯ ಪತ್ರಕರ್ತ ಕೆ ಎಸ್ ಸಚ್ಚಿದಾನಂದಮೂರ್ತಿ ಇಂದು ಬೆಳಗ್ಗೆ (ಅಕ್ಟೋಬರ್ 13) 11.55 ರ ಸುಮಾರಿನಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಶ್ರೀಯುತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಚ್ಚಿದಾನಂದಮೂರ್ತಿ ಅವರು ನಿಧನರಾಗಿರುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಸರಳ ವ್ಯಕ್ತಿತ್ವದ ಸಚ್ಚಿದಾನಂದಮೂರ್ತಿ ಅವರು ಸ್ಥಳೀಯ ಪತ್ರಕರ್ತ ಬಳಗದಲ್ಲಿ ‘ಸಚ್ಚಿ’ ಎಂದೇ ಹೆಸರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಲಾರ ಜಿಲ್ಲೆಯ ಮೂಲದವರಾದ ಸಚ್ಚಿದಾನಂದ ಅವರು ಬೆಂಗಳೂರಿನ ಸೆಂಟ್ರಲ್‌ ಕಾಲೇಜಿನಲ್ಲಿ  ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು ಇಂಡಿಯನ್‌ ಎಕ್ಸ್‌ಪ್ರೆಸ್‌ ಆಂಗ್ಲ ಪತ್ರಿಕೆ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದರು.

ನಂತರದಲ್ಲಿ ದಿ ವೀಕ್ ಹಾಗೂ ಮಲಯಾಳಿ ಮನೋರಾಮ ವಾರಪತ್ರಿಕೆಗೆ ಸೇರಿ ಬೆಂಗಳೂರು ಹಾಗೂ ದೆಹಲಿ ಬ್ಯೂರೊ ಮುಖ್ಯಸ್ಥ, ಮಾಜಿ ಸ್ಥಾನೀಯ ಸಂಪಾದಕರಾಗಿ ಸುಮಾರು ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಕೇಂದ್ರ ಪತ್ರಿಕಾ ಮಾನ್ಯತೆ ಸಮಿತಿ ಮತ್ತು ಪತ್ರಿಕಾ ಮಂಡಳಿ, ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ, ಲೋಕಸಭೆ ಮಾಧ್ಯಮ ಸಲಹಾ ಸಮಿತಿಯ ಅಧ್ಯಕ್ಷ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಧ್ಯಮ ಸಲಹಾ ಸದಸ್ಯ ಸೇರಿದಂತೆ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಸಚ್ಚಿದಾನಂದ ಅವರಿಗೆ 2006ರಲ್ಲಿ ಕರ್ನಾಟಕ ರಾಜ್ಯ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಹೇಳಿದ್ದ ಹಸಿ ಸುಳ್ಳು-‘ನಾನೂ ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ’

ಸಚ್ಚಿದಾನಂದ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. “ನನಗೆ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಹಿರಿಯ ಕನ್ನಡಿಗ ಪತ್ರಕರ್ತರಲ್ಲಿ ಒಬ್ಬರಾಗಿದ್ದರು. ರಾಜ್ಯ-ರಾಷ್ಟ್ರಗಳ ವಿದ್ಯಮಾನಗಳ ಜ್ಞಾನಕೋಶದಂತಿದ್ದ ಸಚ್ಚಿದಾನಂದಮೂರ್ತಿಯವರ‌ ಸಾವು ಮಾಧ್ಯಮರಂಗಕ್ಕೆ ತುಂಬಲಾರದ ನಷ್ಟ” ಎಂದು ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಸಚ್ಚಿದಾನಂದ ಅವರ ಮೃತದೇಹವನ್ನು ಜಯನಗರದ 5ನೇ ಬ್ಲಾಕ್‌ನಲ್ಲಿರುವ ನಂ.558,10 ನೇ ಮುಖ್ಯ
ರಸ್ತೆಯ ಅವರ ಮನೆಯಲ್ಲಿ ಸಂಜೆ 5 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು. 5 ಗಂಟೆ ನಂತರ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ಮಾಡುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...