ಬೆಂಗಳೂರು | ಕಿವಿ ಕೇಳಿಸದ, ಮಾತು ಬಾರದ ಮಹಿಳೆಯ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ದೂರು ದಾಖಲು

Date:

ಕಿವಿ ಕೇಳಿಸದ ಮತ್ತು ಮಾತು ಬಾರದ ಮಹಿಳೆಯ ಎಂಟು ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸದ್ಯ ಪೊಲೀಸರು ಆರೋಪಿಯ ವಿರುದ್ಧ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಆರೋಪಿಯ ಸುಳಿವು ಸಿಕ್ಕಿದ್ದು, ಆತನಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

“ಕಿವಿ ಕೇಳಿಸದ, ಮಾತು ಬಾರದ ಮಹಿಳೆ ಮತ್ತು ಆಕೆಯ ಮಗಳು ಮೂಲತಃ ಕರ್ನಾಟಕದವರಲ್ಲ. ಜೀವನ ಸಾಗಿಸಲು ಬೆಂಗಳೂರಿನಲ್ಲಿದ್ದಾರೆ. ಸಂತ್ರಸ್ತೆಯ ತಾಯಿ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಬಲೂನ್ ಮಾರಾಟ ಮಾಡುತ್ತಾರೆ” ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆ ತನ್ನ ಎಂಟು ವರ್ಷದ ಮಗುವನ್ನು ನೆರಳಿನಲ್ಲಿ ಕೂರಿಸಿ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬಲೂನ್ ಮಾರಾಟ ಮಾಡಲು ಹೋಗಿದ್ದಳು” ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ, ಒಬ್ಬ ವ್ಯಕ್ತಿ ಮಗುವಿಗೆ ಆಹಾರ ಕೊಡಿಸುವುದಾಗಿ ಹೇಳಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗುವಿನ ಕಿರುಚಾಟ ಕೇಳಿದ ತಾಯಿ ಮಗಳ ಬಳಿಗೆ ಓಡಿ ಬಂದಿದ್ದಾರೆ. ಆದರೆ, ವೇಳೆಗಾಗಲೇ ಶಂಕಿತ ವ್ಯಕ್ತಿ ಪರಾರಿಯಾಗಿದ್ದಾನೆಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಯಿ ಅಳಲು ಪ್ರಾರಂಭ ಮಾಡಿದ್ದಂತೆ ಜನರು ಸುತ್ತಲೂ ಜಮಾಯಿಸಿದ್ದಾರೆ. ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ತಾಯಿ ಮೂಕಳಾಗಿರುವುದರಿಂದ, ಅವರು ಸಂಕೇತ ಭಾಷೆಯ ಮೂಲಕ ಘಟನೆಯನ್ನು ವಿವರಿಸಿದ್ದಾರೆ. ನಂತರ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ವರದಿಗಳು ದೃಢಪಡಿಸಿವೆ” ಎಂಬ ಬಗ್ಗೆ ತನಿಖಾಧಿಕಾರಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...