ಶಿವಮೊಗ್ಗ | ಹುಂಡೈ ಕಾರು ಶೋರೂಮ್‌ ಬೆಂಕಿಗೆ ಆಹುತಿ

Date:

ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಕಾರು ಶೋ ರೂಮ್‌ ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ನಡೆದಿದೆ.

ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ. ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್​ನಿಂದ ಮಾಡಿದ್ದಾಗಿದೆ. ಬೆಂಕಿಗೆ ಶೋರೂಂನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಜತೆಗೆ, ಶೋ ರೂಂನ ಮೇಲ್ಭಾಗ ಸೇರಿದಂತೆ ನೆಲಮಹಡಿಗೂ ಬೆಂಕಿ ಆವರಿಸಿದ್ದು, ಇದರಿಂದ ಶೋ ರೂಂನಲ್ಲಿ ಡಿಸ್‌ಪ್ಲೇಗೆಂದು ಇಟ್ಟಿದ್ದ 6 ಕಾರುಗಳಲ್ಲಿ 3 ಕಾರುಗಳು ಸಂಪೂರ್ಣ ಸುಟ್ಟು ಹೋಗಿವೆ. ಸರ್ವೀಸ್​ಗೆ ಎಂದು ಇಟ್ಟಿದ್ದ ಕಾರುಗಳು ಹಾಗೂ ಪಕ್ಕದ ಟಾಟಾ ಶೋ ರೂಂನ ಹೊರಭಾಗದಲ್ಲಿದ್ದ ನಾಲ್ಕರಿಂದ – ಐದು ಕಾರುಗಳು ಸಹ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಭಾಗಶಃ ಹಾನಿಯಾಗಿವೆ. ಅಲ್ಲದೇ ನೆಲ ಮಾಳಿಗೆಯಲ್ಲಿ ಇಟ್ಟಿದ್ದ ಕಾರಿನ ಬಿಡಿ ಭಾಗಗಳು ಸುಟ್ಟು ಭಸ್ಮವಾಗಿವೆ.

ಬೆಂಕಿಯ ತೀವ್ರತೆ ಹೆಚ್ಚಾದ ಹಿನ್ನೆಲೆ ಶೋ ರೂಮ್‌ನಲ್ಲಿದ್ದ ಕೆಲವು ಕಾರುಗಳು ಹಾಗೂ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು, ವಿಷಯ ತಿಳಿದು ದೊಡ್ಡ ಸಂಖ್ಯೆಯ ಜನರು ಶೋರೂಂ ಬಳಿ ಜಮಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಗ್ನಿಶಾಮಕದಳದ ನಾಲ್ಕು ವಾಹನಗಳು ಬೆಂಕಿ ನಂದಿಸುವ ಕಾರ್ಯ ನಡೆಸಿವೆ. ಶೋ ರೂಂನಲ್ಲಿ ಎಷ್ಟು ಕಾರುಗಳು ಹಾಗೂ ಇತರ ನಷ್ಟ ಉಂಟಾಗಿವೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಕಾರು ಶೋ ರೂಂ ಮಾಲೀಕ ರಾಹುಲ್ ಅವರು ವಿದೇಶಿ ಪ್ರವಾಸದಲ್ಲಿದ್ದಾರೆ. ಸ್ಥಳಕ್ಕೆ ಶಿವಮೊಗ್ಗ ನಗರ ಡಿವೈಎಸ್ಪಿ ಸೇರಿದಂತೆ ಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ಶೋ ರೂಂ ಸೇಲ್ಸ್​ ಮ್ಯಾನೇಜರ್​ ಮಣಿಕಂಠ, “ರಾತ್ರಿ ಸುಮಾರು 8 ಗಂಟೆಗೆ ಶೋರೂಂಗೆ ಬೆಂಕಿ ಬಿದ್ದಿದೆ ಎಂಬ ಮಾಹಿತಿ ಬಂದಿದೆ. ಆದರೆ, ಬೆಂಕಿ ಹೇಗೆ ಬಿತ್ತು ಎಂಬ ಬಗ್ಗೆ ಮಾಹಿತಿ ಇಲ್ಲ. ತನಿಖೆಯಿಂದ ಸತ್ಯ ಹೊರಬರಬೇಕಿದೆ. ಶೋ ರೂಂನಲ್ಲಿ ಡಿಸ್‌ಪ್ಲೇಗೆ ಇಟ್ಟಿದ್ದ 6 ಕಾರುಗಳ ಪೈಕಿ 3 ಕಾರು ಸುಟ್ಟು ಹೋಗಿವೆ. ಜತೆಗೆ, ಕಾರಿನ ಬಿಡಿ ಭಾಗಗಳು ಸುಟ್ಟಿವೆ. ಪಾರ್ಕಿಂಗ್​ನಲ್ಲಿದ್ದ ಗ್ರಾಹಕರ ಕಾರುಗಳು ಸೇಫ್ ಆಗಿವೆ. ಗ್ರಾಹಕರು ಭಯಪಡುವ ಅಗತ್ಯವಿಲ್ಲ. ಅಗ್ನಿಶಾಮಕ ದಳದವರು ನಮಗೆ ಸರಿಯಾಗಿ ಸ್ಪಂದಿಸಿಲ್ಲ” ಎಂದು  ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕನ್ನಡ ನಾಮಫಲಕ ಬಳಸದ 18 ಉದ್ದಿಮೆಗಳು ತಾತ್ಕಾಲಿಕ ಬಂದ್

ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಜಿ.ಮಹಾಲಿಂಗಪ್ಪ, “ಶೋರೂಂಗೆ ಬೆಂಕಿ ಬಿದ್ದಿರುವ ಬಗ್ಗೆ ಸುಮಾರು 10 ಗಂಟೆಗೆ ವಿಷಯ ತಿಳಿಯಿತು.‌ ಕೂಡಲೇ ಒಂದು ವಾಹನವನ್ನು ಕಳುಹಿಸಿಕೊಟ್ಟೇವು. ಬೆಂಕಿ ಪ್ರಮಾಣ ಹೆಚ್ಚಾದ ಕಾರಣ ಇನ್ನೊಂದು ವಾಹನವನ್ನು ಕಳುಹಿಸಿಕೊಡಲಾಯಿತು. ಮುಖ್ಯವಾಗಿ ಶೋ ರೂಂನವರು ಬೆಂಕಿ ಶಮನದ ಕುರಿತು ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಇದರಿಂದಲೇ ಬೆಂಕಿ ಹೆಚ್ಚಿನ ಪ್ರಮಾಣದಲ್ಲಿ ಹರಡಲು ಕಾರಣವಾಯಿತು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...