ಡಿಕೆಶಿ ಕಾಲ ಕೆಳಗೆ ಸಿದ್ದರಾಮಯ್ಯ ಸರ್ಕಾರ: ಎಚ್‌ ಡಿ ಕುಮಾರಸ್ವಾಮಿ ಲೇವಡಿ

Date:

  • ರಾಜ್ಯ ಸರ್ಕಾರದ ನಿರ್ಧಾರ ಕಾನೂನು ಬಾಹಿರ
  • ಸರ್ಕಾರದ ನಿರ್ಣಯಗಳನ್ನು ಬಯಲಾಗುತ್ತಿವೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಯನ್ನು ಹಿಂಪಡೆದಿರುವ ರೀತಿ ನೋಡಿದರೆ, ಅವರ ಸರ್ಕಾರ ಡಿಕೆಶಿ ಕಾಲ ಕೆಳಗೆ ಇರುವುದನ್ನು ಪ್ರದರ್ಶಿಸಿದಂತಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಟೀಕಿಸಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, “ರಾಜ್ಯ ಸರ್ಕಾರದ ನಿರ್ಧಾರ ಕಾನೂನು ಬಾಹಿರ. ವಕೀಲರು, ಕಾನೂನು ಉಪನ್ಯಾಸಕರೂ ಆಗಿದ್ದ ಮುಖ್ಯಮಂತ್ರಿಯಿಂದ ಇಂತಹ ತೀರ್ಮಾನ ಬಂದಿರುವುದು ಅವರ ಸರ್ಕಾರದ ನಿರ್ಣಯಗಳನ್ನು ಬಯಲು ಮಾಡಿದೆ” ಎಂದು ಹೇಳಿದರು.

“ಕಾನೂನುಬಾಹಿರ ಚಟುವಟಿಕೆಗಳಿಗೆ ರಕ್ಷಣೆ ನೀಡುವ ಸಲುವಾಗಿಯೇ ಅನುಮತಿ ಹಿಂಪಡೆಯಲಾಗಿದೆ. ಸಂವಿಧಾನದ ರಕ್ಷಕರು ಎಂದು ಘೋಷಿಸಿಕೊಂಡವರು ಈ ತೀರ್ಮಾನ ಮಾಡಿದ್ದು ಸರಿಯೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದಿನ ಬಿಜೆಪಿ ಸರ್ಕಾರ ಸ್ಪೀಕರ್ ಅನುಮತಿ ಪಡೆಯದೆಯೇ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಕಾನೂನುಬಾಹಿರ ಎಂಬ ಕಾಂಗ್ರೆಸ್ ಆರೋಪ ಸರಿಯಲ್ಲ. ಅನುಮತಿ ನೀಡಲು ಸ್ಪೀಕರ್ ಒಪ್ಪಿಗೆ ಬೇಕಿಲ್ಲ. ಇದನ್ನು ಬೇಕಿದ್ದರೆ ವಿಧಾನಸಭೆಯಲ್ಲಿ ಚರ್ಚಿಸೋಣ” ಎಂದರು.

“ಈ ಹಿಂದೆ ಪ್ರಕರಣವೊಂದರಲ್ಲಿ ತನಿಖೆಗೆ ಅನುಮತಿ ಕೋರಿ ಆರ್‌ಟಿಐ ಕಾರ್ಯಕರ್ತರೊಬ್ಬರು ಸ್ಪೀಕರ್‌ಗೆ ಪತ್ರ ಬರೆದಿದ್ದರು. ಅದಕ್ಕೆ ಉತ್ತರಿಸಿದ್ದ ಸ್ಪೀಕರ್ ಕಾರ್ಯಾಲಯ, ಇದಕ್ಕೆ ಸ್ಪೀಕರ್‌ ಅನುಮತಿ ಬೇಕಿಲ್ಲ ಎಂದು ಪತ್ರ ಬರೆದಿತ್ತು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಪ್ಪಿದ ಘೋರ ದುರಂತ- ಆಳುವವರ ಅಲಕ್ಷ್ಯ ಅಕ್ಷಮ್ಯ

ಬಿ ಆರ್ ಪಾಟೀಲ ವಿಚಾರವಾಗಿ ಪ್ರತಿಕ್ರಿಯಿಸಿ, “ಅವರ ಪಕ್ಷದ ನಾಯಕರ ಧೋರಣೆಗೆ ಮನನೊಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಒಬ್ಬ ಆಡಳಿತ ಪಕ್ಷದ ಶಾಸಕರ ಪರಿಸ್ಥಿತಿ ಹೀಗಾದಾಗ ಬೇರೆಯವರ ಗತಿ ಏನು? ಈಗಿನ ಸರ್ಕಾರದಲ್ಲಿ ಶಾಸಕರಿಗೆ ಬೆಲೆ ಎಷ್ಟಿದೆ ಎಂದು ನಾನು ಹೇಳಬೇಕಿಲ್ಲ. ರಾಯರೆಡ್ಡಿ, ಶ್ಯಾಮನೂರು ಶಿವಶಂಕರಪ್ಪ ಮತ್ತೀಗ ಬಿ ಆರ್ ಪಾಟೀಲ ಮನನೊಂದು ಮಾತನಾಡಿದ್ದಾರೆ” ಎಂದು ತಿಳಿಸಿದರು.

“ಕಾಂಗ್ರೆಸ್‌ನವರು ಬಿಜೆಪಿಯ ಶೇ 40 ಭ್ರಷ್ಟಾಚಾರದ ಬಗ್ಗೆ ಮಾತನಾಡಿ ಅಧಿಕಾರ ಹಿಡಿದರು. ಈಗ ಅದನ್ನೇ ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ಆಗಿದ್ದ ಹಲವು ಟೆಂಡರ್‌ಗಳನ್ನು ಈಗಿನ ಸರ್ಕಾರ ಕಮಿಷನ್ ಸಲುವಾಗಿ ತಡೆ ಹಿಡಿದಿದೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...