ಸಿದ್ದರಾಮಯ್ಯ ನಮ್ಮ ನಾಯಕ, ಅವರು ಎಲ್ಲ ಚುನಾವಣೆಗಳಿಗೂ ಬೇಕು: ಡಿ ಕೆ ಶಿವಕುಮಾರ್

Date:

ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಒಳಗೊಂಡು ಲೋಕಸಭಾ ಚುನಾವಣೆವರೆಗೂ ಅವರು ಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಮುಂದಿನ ಚುನಾವಣೆಗೂ ಸಿಎಂ ಬೇಕೆ ಬೇಕು ಎನ್ನುವ ಸಚಿವರುಗಳ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿಗಳು, ನಮ್ಮ ನಾಯಕರು. ಎಲ್ಲ ಚುನಾವಣೆಗಳಿಗೂ ಅವರು ಬೇಕು. ಕಾಂಗ್ರೆಸ್ ಪಕ್ಷ ಎರಡು ಬಾರಿ ಸಿಎಂ ಆಗುವ ಅವಕಾಶ ಕೊಟ್ಟಿದೆ. ದಿನ ಬೆಳಗಾದರೇ ಅವರ ಸುದ್ದಿ ಎತ್ತಿಕೊಂಡು ಅವರ ಹೆಸರು ದುರುಪಯೋಗ ಮಾಡೋದು ಬೇಡ. ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಸಿಎಂ ಸಿದ್ದರಾಮಯ್ಯ ಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯನವರು ಎರಡನೇ ಬಾರಿಯೂ ಸಿಎಂ ಆಗಿ ಒಳ್ಳೆ ಕೆಲಸ ಮಾಡುತ್ತಾ ಇದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿ ಆಹಾರ ಆಗಬಾರದು. ನಮ್ಮಲ್ಲಿ ಗೊಂದಲದ ಯಾವ ಹೇಳಿಕೆಯೂ ಇಲ್ಲ. ಕಾಂಗ್ರೆಸ್ ಪಕ್ಷ ಎಲ್ಲವನ್ನು ಗಮನಿಸುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ನೀರಾವರಿ ವಿಚಾರವಾಗಿ ಪಕ್ಷಾತೀತ ಹೋರಾಟ ಮಾಡಬೇಕು ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಮಾತನಾಡಿದ ಡಿ ಕೆ ಶಿವಕುಮಾರ್, ರಾಜ್ಯದ ನೆಲ, ಜಲ ಹಿತಕ್ಕಾಗಿ ನಾವು ಬದ್ಧವಾಗಿದ್ದೇವೆ. ಅವರು ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಮಹದಾಯಿ ವಿಚಾರವಾಗಿ ನಾವೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಇದು ಅವರ ಹೋರಾಟವಲ್ಲ. ರಾಜ್ಯದ ಹೋರಾಟ. ಅವರು ಅಧಿಕಾರದಲ್ಲಿ ಇರುವಾಗ ಹೋರಾಟ ಯಾಕೆ ಮಾಡಬೇಕು? ಎಂದು ಪ್ರಶ್ನಿಸಿದರು.

ನಾವು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ನಮಗೆ ಅದರ ಅಗತ್ಯವೂ ಇಲ್ಲ. ಅವರಿಗೆ ರಾಜಕಾರಣ ಮಾಡಿ ರೂಢಿ ಇರಬಹುದು. ನಾವು ಹೋರಾಟ ಮಾಡಿದಾಗ ಅವರು ಯಾವ ರೀತಿ ಟೀಕೆ ಮಾಡಿದ್ದಾರೆ ಎಂದು ನೋಡಿದ್ದೇವೆ. ನಾವು ಅದನ್ನು ಮರೆತು ರಾಜ್ಯದ ಹಿತಕ್ಕಾಗಿ ನೀರಾವರಿ ಯೋಜನೆಗೆ ಪ್ರಯತ್ನಿಸುತ್ತೇವೆ. ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಘೋಷಣೆ ಮಾಡಿದ್ದೀರಿ, ಅದನ್ನು ಕೊಟ್ಟಿಲ್ಲ ಎಂದು ಅವರು ಸಂಸತ್ತಿನಲ್ಲಿ ಎಂದಾದರೂ ಪ್ರಶ್ನೆ ಮಾಡಿದ್ದಾರಾ? ದೇವೇಗೌಡರು, ಕುಮಾರಸ್ವಾಮಿ, ಕೇಂದ್ರ ಸಚಿವರು, ಸಂಸದರು ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಆ ಕೆಲಸದಲ್ಲೂ ವಿಫಲರಾಗಿದ್ದಾರೆ. ಮೊದಲು ಈ ಕೆಲಸ ಮಾಡಲಿ. ಕಾವೇರಿ ಗೋದಾವರಿ ಜೋಡಣೆ ಮಾಡಿದರೆ ಸಂತೋಷ. ಅವರು ಯೋಜನೆ ತರಲಿ. ನಮ್ಮಿಂದ ಯಾವ ಸಹಕಾರ ಬೇಕು ಹೇಳಲಿ. ನಾವು ನೀಡುತ್ತೇವೆ. ಇಲ್ಲಿಂದಲೇ ಅವರಿಗೆ ಧನ್ಯವಾದ ತಿಳಿಸುತ್ತೇವೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...