ಮೋದಿ ಭೇಟಿಗೆ ಸಮಯ ಸಿಕ್ಕಿರುವಾಗ ಸಿದ್ದರಾಮಯ್ಯ ಕ್ಷುಲ್ಲಕ ರಾಜಕೀಯ ಬದಿಗಿಡಲಿ: ಆರ್‌ ಅಶೋಕ್

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯದ ಹಿತಾಸಕ್ತಿ ಕಾಪಾಡುವುದಕ್ಕಿಂತ ಪ್ರಧಾನ ಮಂತ್ರಿಗಳ ಮೇಲೆ ಮತ್ತು ಕೇಂದ್ರ ಸರ್ಕಾರದ ಮೇಲೆ ಇಲ್ಲಸಲ್ಲದ, ರಾಜಕೀಯ ಪ್ರೇರಿತ ಆರೋಪ ಮಾಡುವುದೇ ದೊಡ್ಡ ಕೆಲಸವಾದಂತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ.

ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಿ ಮೋದಿ ಅವರು ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜೊತೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳುವುದು ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಗೆ ಇರಬೇಕಾದ ಪ್ರಮುಖ ಲಕ್ಷಣ ಮಾತ್ರವಲ್ಲ ಅದು ಕರ್ತವ್ಯ” ಎಂದಿದ್ದಾರೆ.

“ಮೊನ್ನೆ ಸದನದಲ್ಲಿ ಪ್ರಧಾನಿ ಮೋದಿ ಅವರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೋರಿದ ರೋಷಾವೇಷ ಗಮನಿಸಿದರೆ ರಾಜ್ಯದ ಜನತೆಯ ಹಿತರಕ್ಷಣೆಗಿಂತ ತಮ್ಮ ಹೈಕಮಾಂಡ್ ಅನ್ನು ಮೆಚ್ಚಿಸುವುದೇ ಅವರ ಉದ್ದೇಶವೆಂದು ಅನ್ನಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳಿಗೆ ತಮ್ಮದೇ ಆದ ಸಂವಿಧಾನಬದ್ಧ ಜವಾಬ್ದಾರಿಗಳಿವೆ. 12 ವರ್ಷಗಳ ಕಾಲ ಒಂದು ರಾಜ್ಯದ ಮುಖ್ಯಮಂತ್ರಿಗಳಾಗಿ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸಿರುವ ಪ್ರಧಾನಿ ಮೋದಿ ಅವರಿಗೆ ರಾಜ್ಯ ಸರ್ಕಾರಗಳ ಇತಿಮಿತಿಗಳು, ಅಗತ್ಯತೆಗಳು, ಅಪೇಕ್ಷೆಗಳ ಬಗ್ಗೆ ಇರುವಷ್ಟು ಅರಿವು, ಅವಗಾಹನೆ, ಸಂವೇದನೆ ಬಹುಶಃ ಹಿಂದಿನ ಬೇರೆ ಯಾವ ಪ್ರಧಾನಮಂತ್ರಿಗೂ ಇರಲಿಲ್ಲ” ಎಂದು ತಿಳಿಸಿದ್ದಾರೆ.

“ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರ ಭೇಟಿಗೆ ಸಮಯ ಸಿಕ್ಕಿರುವಾಗ ತಮ್ಮ ಕ್ಷುಲ್ಲಕ ರಾಜಕೀಯ ಬದಿಗಿಟ್ಟು, ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ, ಕನ್ನಡ ನಾಡಿನ ಆರೂವರೆ ಕೋಟಿ ಜನತೆಯ ಹಿತರಕ್ಷಣೆಯ ದೃಷ್ಟಿಯಿಂದ ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ತಮ್ಮ ಮುತ್ಸದ್ಧಿತನ ಪ್ರದರ್ಶಿಸುತ್ತಾರೆ ಎಂದು ಭಾವಿಸುತ್ತೇನೆ” ಎಂದು ಆರ್‌ ಅಶೋಕ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...