ಸಿದ್ದರಾಮಯ್ಯ ಲೂಟಿಕೋರ, ಮಂಗ; ಅವರನ್ನು ನನಗೆ ಹೋಲಿಸಬೇಡಿ: ನಾಲಗೆ ಹರಿಬಿಟ್ಟ ಈಶ್ವರಪ್ಪ

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಟೀಕಿಸುವ ಭರದಲ್ಲಿ ನಾಲಗೆ ಹರಿಬಿಟ್ಟಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ, ‘ಸಿದ್ದರಾಮಯ್ಯ ಲೂಟಿಕೋರ, ಅವರನ್ನು ನನಗೆ ಹೋಲಿಸಬೇಡಿ. ಮಂಗ ಹಾರಿದಂತೆ ಪಕ್ಷದಿಂದ ಪಕ್ಷಕ್ಕೆ ಹಾರುತ್ತಾರೆ’ ಎಂದು ಹೇಳಿಕೆ ನೀಡಿದ್ದಾರೆ.

ಬರ ಅಧ್ಯಯನ ಪ್ರವಾಸದ ವೇಳೆ ಮಂಗಳವಾರ ಕುಷ್ಟಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ವೇಳೆ, ‘ಬಿಜೆಪಿಯಲ್ಲಿ ಈಶ್ವರಪ್ಪ ಸವಕಲು ನಾಣ್ಯ’ ಎಂದು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಈ ರೀತಿ ಏಕವಚನದಲ್ಲೇ ಪ್ರತಿಕ್ರಿಯೆ ನೀಡುವ ಮೂಲಕ ನಾಲಗೆ ಹರಿಬಿಟ್ಟಿದ್ದಾರೆ.

ರಾಜ್ಯ ಸರ್ಕಾರವನ್ನು ಮನಬಂದಂತೆ ಟೀಕಿಸಿದ ಈಶ್ವರಪ್ಪ, ‘ರೈತ ವಿರೋಧಿ ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ ಏನೂ ಇಲ್ಲ. ಇದು ಹುಚ್ಚು ದೊರೆ ಸರ್ಕಾರ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬಿಜೆಪಿಯಲ್ಲಿ ನಾನು ಶಿಸ್ತಿನ ಸಿಪಾಯಿ. ನಮ್ಮ ನಾಯಕರು ಹೇಳಿದ್ದನ್ನು ಅರ್ಧಗಂಟೆಯಲ್ಲಿ ಪಾಲಿಸಿದೆ. ಆದರೆ, ಸಿದ್ದರಾಮಯ್ಯ ಮರದಿಂದ ಮರಕ್ಕೆ ಹಾರುವ ಮಂಗನಂತೆ. ಹಿಂದೆ ದೇವೇಗೌಡರಿಗೆ ಮೋಸ ಮಾಡಿ ಜೆಡಿಎಸ್‌ನಿಂದ ಹೊರಬಂದರು. ಈಗ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರನ್ನು ಏನಾದರೂ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೇಳಿ ನೋಡಲಿ. ಮತ್ತೆ ಬೇರೆ ಪಕ್ಷಕ್ಕೆ ಮಂಗನಂತೆ ಹೋಗುತ್ತಾರೆ. ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಮತ್ತೊಂದು ಪಕ್ಷಕ್ಕೆ ಹಾರಿ ಹೋಗುತ್ತಾರೆ’ ಎಂದು ಹರಿಹಾಯ್ದಿದ್ದಾರೆ.

‘ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಮಾತು ಯಾರೂ ಕೇಳಲ್ಲ. ಇನ್ನು ಸಚಿವರ ಮಾತು ಯಾರು ಕೇಳುತ್ತಾರೆ. ಎಲ್ಲರೂ ಬಾಯಿ ಮುಚ್ಚಿಕೊಂಡಿರಬೇಕು. ಸುರ್ಜೇವಾಲ ಹಾಗೂ ವೇಣುಗೋಪಾಲ್ ಹಾದಿ ಬೀದಿಯಲ್ಲಿ ನಿಂತು ಮಾತನಾಡದಂತೆ ತಿಳಿಸಿದ ಮೇಲೂ ಸಿದ್ದರಾಮಯ್ಯ ಮಾತನಾಡಿದರು. ಇವರದು ಪಕ್ಷದೊಳಗೆ ಏನೂ ನಡೆಯಲ್ಲ’ ಎಂದು ಅವರು ಹೇಳಿದರು.

‘ರಾಜ್ಯದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ರಾಜ್ಯ ಸರ್ಕಾರ. ಇದಕ್ಕೆ ಕಣ್ಣು, ಕಿವಿ ಏನೂ ಇಲ್ಲ. ಇದು ಹುಚ್ಚು ದೊರೆಯ ಸರ್ಕಾರ. ಹಾಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಜಾರ್ಜ್ ರಾಜೀನಾಮೆ ಕೊಡಬೇಕು’ ಎಂದು ಕೆ ಎಸ್ ಈಶ್ವರಪ್ಪ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...