ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ: ಸಿಎಂ ಸಿದ್ದರಾಮಯ್ಯ

Date:

ನೆಹರೂ-ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತ್ ಜೋಡೋ ಸಭಾಂಗಣದಲ್ಲಿ ಆಯೋಜಿಸಿದ್ದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

“ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಹೋರಾಟದ ಮಾರ್ಗದಲ್ಲೇ ಅಧಿಕಾರಕ್ಕೆ ಬರುತ್ತದೆ. ಭಾರತ್ ಜೋಡೋ ನಂತರ ರಾಹುಲ್ ಗಾಂಧಿ ಅವರು ಮತ್ತೊಂದು ಸುತ್ತು ಪಾದಯಾತ್ರೆ ಹೊರಟಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ನೇತೃತ್ವ ವಹಿಸುತ್ತಾರೆ. ಪ್ರಧಾನಿ ಆಗುತ್ತಾರೆ” ಎಂದು ಭರವಸೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ, ಜನ ಸಂಘ, RSS ಹಾಗೂ ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಲಿಲ್ಲ. ಬ್ರಿಟಿಷರ ಅವಧಿಯಲ್ಲೇ RSS ಹುಟ್ಟಿತ್ತು‌. ಆದರೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ಆದ್ದರಿಂದ ಬಿಜೆಪಿಯ ಢೋಂಗಿತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಸಂವಿಧಾನ ಅಪಾಯದಲ್ಲಿದ್ದು, ಪ್ರಜಾಪ್ರಭುತ್ವ ಶಿಥಿಲವಾಗುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ

“ಹಿಂದೂ ಬೇರೆ-ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಢೋಂಗಿ ಹಿಂದುತ್ವ” ಎಂದು ಸಿಎಂ ವ್ಯಂಗ್ಯವಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅರಣ್ಯ ಸಚಿವ ಈಶ್ವರ್ ಖಂಡ್ರೆ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...