ಬಿಜೆಪಿ ಜತೆಗಿನ ನಾಲ್ಕು ದಶಕಗಳ ಸಂಬಂಧಕ್ಕೆ ಎಳ್ಳು ನೀರು ಬಿಟ್ಟ ಸೊಗಡು ಶಿವಣ್ಣ

Date:

  • ಆರ್‌ಎಸ್‌ಎಸ್ ನಾಯಕ ಸೊಗಡು ಶಿವಣ್ಣ ಬಿಜೆಪಿಗೆ ರಾಜೀನಾಮೆ
  • ತುಮಕೂರು ನಗರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ

ಕೊರಳಿಗೆ ಎರಡು ಗೋಣಿಚೀಲ ನೇತು ಹಾಕಿಕೊಂಡು ಮತ ಭಿಕ್ಷೆ ಕೇಳುವ ಮೂಲಕ ಸುದ್ದಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಬಿಜೆಪಿ ಜತೆಗಿನ ನಾಲ್ಕು ದಶಕಗಳ ಸಂಬಂಧಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ.

ತುಮಕೂರು ನಗರ ಕ್ಷೇತ್ರದಿಂದ ಟಿಕೆಟ್ ಸಿಗದೆ ಬಂಡೆದ್ದಿದ್ದ ಸೊಗಡು ಶಿವಣ್ಣ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

74 ವರ್ಷ ವಯಸ್ಸಿನ ಆರ್‌ಎಸ್‌ಎಸ್ ನಾಯಕ ತುಮಕೂರಿನಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2013ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. 2018ರಲ್ಲಿ ವರಿಷ್ಠರ ಮಾತಿಗೆ ಕಟ್ಟು ಬಿದ್ದು ಸ್ಪರ್ಧೆಯಿಂದ ಹಿಂದೆ ಸರಿದು, ಜಿ ಬಿ ಜ್ಯೋತಿಗಣೇಶ್ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೆ ಜಿ ಬಿ ಜ್ಯೋತಿಗಣೇಶ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದ್ದು, ಇದರಿಂದ ಮುನಿಸಿಕೊಂಡು ಬಿಜೆಪಿ ಜತೆಗಿನ ಸಂಬಂಧಕ್ಕೆ ನಾಂದಿಹಾಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಪಕ್ಷ ತೊರೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ಪಕ್ಷ ನನ್ನನ್ನು ಕಾಪಾಡುತ್ತದೆ ಎಂದುಕೊಂಡಿದ್ದೆ ಆದರೆ ನನಗೆ ನಂಬಿಕೆ ದ್ರೋಹ ಮಾಡಿದೆ.  ಬಿಜೆಪಿಯ ಎಲ ಸಾಮಗ್ರಿಗಳನ್ನು ನನ್ನ ಮನೆ ಹಾಗೂ ಕಚೇರಿಯ ಹೊರಗೆ ಎಸೆಯುತ್ತೇನೆ” ಎಂದು ಬೆಂಬಲಿಗರ ಸಭೆಯಲ್ಲಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...