ಸೌಂದರ್ಯ ಜಗದೀಶ್ ಆತ್ಮಹತ್ಯೆ | ಬಿಸಿನೆಸ್ ಪಾಲುದಾರರ ವಿರುದ್ಧ ಎಫ್‌ಐಆರ್‌ ದಾಖಲು

Date:

ಕನ್ನಡ ಚಿತ್ರರಂಗದ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬಂಧಿತರು ಜಗದೀಶ್ ಆಪ್ತರಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಸೌಂದರ್ಯ ಜಗದೀಶ್ ಅವರು ಡೆತ್ನೋಟ್ಬರೆದಿದ್ದರು. ಅದನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದ್ದರು. ಅವರು ಬರೆದ ಡೆತ್ನೋಟ್ನಲ್ಲಿ ತಮ್ಮ ವ್ಯವಹಾರದಲ್ಲಿ ಆದ ನಷ್ಟದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೌಂದರ್ಯ ಜಗದೀಶ್ ಅವರು ಸೌಂದರ್ಯ ಕನ್ಸ್ಟ್ರಕ್ಷನ್ ಕಂಪನಿ ನಡೆಸುತ್ತಿದ್ದರು. ಬ್ಯುಸಿನೆಸ್ ಲಾಸ್‌ಗೆ ಪಾಲುದಾರರು ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯುಸಿನೆಸ್ ಲಾಸ್‌ನಿಂದ ₹60 ಕೋಟಿ ನಷ್ಟವುಂಟಾಗಿದೆ. ಇದಕ್ಕೆ ಮೂವರು ಪಾಲುದಾರರೇ ಕಾರಣ. ಚೆನ್ನಾಗಿಯೇ ನಡೆಯುತ್ತಿದ್ದ ಬ್ಯುಸಿನೆಸ್ ನಷ್ಟದಲ್ಲಿದೆ ಎಂದು ಸುಳ್ಳು ಹೇಳಿ ಪಾಲುದಾರರು ನನಗೆ ವಂಚಿಸಿ ಮೋಸ ಮಾಡಿದ್ದಾರೆ. ಬರೋಬ್ಬರಿ 60 ಕೋಟಿ ನಷ್ಟ ತೋರಿಸಿ ವಂಚನೆ ಮಾಡಿದ್ದಾರೆ. ಇದರಿಂದ ಆಘಾತಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಾಮೆಡ್-​​​ಕೆ ಯುಜಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ

ಮನೆಯಲ್ಲಿ ಪತ್ತೆಯಾದ ಡೆತ್ ನೋಟ್ ಅನ್ನು ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದು, ಪಾಲುದಾರರ ವಿರುದ್ಧ ದೂರು ನೀಡಿದ್ದಾರೆ.

ಸೌಂದರ್ಯ ಜಗದೀಶ್ ಅವರ ವ್ಯವಹಾರದ ಪಾಲುದಾರರಾಗಿರುವ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...