ಫೆ.27, 28ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ

Date:

ಫೆ.27, 28ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರ ಫೆಬ್ರವರಿ 27ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಹಾಗಾಗಿ, ಕಾರ್ಯಕ್ರಮದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ನೌಕರರಿಗೆ ಫೆ.27ರಂದು ರಜೆ ನೀಡಿದರೆ, ಇತರೆ ಬೇರೆಬೇರೆ ಜಿಲ್ಲೆಗಳಿಂದ ಬರುವ ನೌಕರರಿಗೆ ಎರಡು ದಿನ  ಫೆ.27 ಮತ್ತು 28 ರಜೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೆ. 27ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ನೌಕರರು ಭಾಗಿಯಾಗುವ ನಿರೀಕ್ಷೆಯಿದೆ. ಸಮ್ಮೇಳನದಲ್ಲಿ ನೌಕರರು ಭಾಗವಹಿಸಲು ಅನುಕೂಲವಾಗಲು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.

ಸಾಂದರ್ಭಿಕ ರಜೆ

ಸಮ್ಮೇಳನದಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತಗೊಳಿಸಿ ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ, ನೌಕರರಿಗೆ ಫೆ. 27ರಂದು ಒಂದು ದಿನ ಹಾಗೂ ಇತರೆ ಜಿಲ್ಲೆಗಳ ಅಧಿಕಾರಿ, ನೌಕರರಿಗೆ ಪ್ರಯಾಣ ದಿನ ಸೇರಿದಂತೆ ಫೆ.27 ಮತ್ತು 28ರಂದು 2 ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಷರತ್ತುಗಳನ್ವಯ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಪರಿಷತ್ ಉಪಚುನಾವಣೆ | ಅರ್ಹ ಶಿಕ್ಷಕ ಮತದಾರರಿಗೆ ಫೆ.16 ರಂದು ವಿಶೇಷ ಸಾಂದರ್ಭಿಕ ರಜೆ

ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಸರ್ಕಾರಿ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ನಂತರ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಅವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು. ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳು, ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡತಕ್ಕದ್ದು ಎಂದು ಸೂಚನೆ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...