ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಶಂಕಿತನ ಪತ್ತೆಗಾಗಿ ನಾಲ್ಕು ಫೋಟೋ ಬಿಡುಗಡೆ ಮಾಡಿದ ಎನ್‌ಐಎ

Date:

ಬೆಂಗಳೂರಿನ ವೈಟ್‌ಫೀಲ್ಡ್‌ ಬಳಿಯ ಕುಂದಲಹಳ್ಳಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತನ ಪತ್ತೆಗಾಗಿ ಎನ್‌ಐಎ ಅಧಿಕಾರಿಗಳು ಇದೀಗ ನಾಲ್ಕು ಫೋಟೋ ಬಿಡುಗಡೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎನ್‌ಐಎ, ”ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಸಂಬಂಧಿಸಿದಂತೆ, ಶಂಕಿತನನ್ನು ಗುರುತಿಸಲು ನಾಗರಿಕರು ಸಹಕರಿಸಬೇಕು” ಎಂದು ಎನ್‌ಐಎ ಕೋರಿದೆ.

”ಶಂಕಿತನನ್ನು ಕಂಡವರು 080-29510900, 8904241100 ಗೆ ಕರೆ ಮಾಡಿ ಅಥವಾ ಯಾವುದೇ ಮಾಹಿತಿಯೊಂದಿಗೆ info.blr.nia@gov.in ಗೆ ಇಮೇಲ್ ಮಾಡಿ. ಮಾಹಿತಿ ನೀಡಿದವರ ಗುರುತನ್ನು ಗೌಪ್ಯವಾಗಿ ಇಡಲಾಗುತ್ತದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ಆರೋಪಿಯ ಸುಳಿವು ಕೊಟ್ಟವರಿಗೆ ₹10 ಲಕ್ಷ ಬಹುಮಾನ ನೀಡುವುದಾಗಿ ಎನ್‍ಐಎ ಘೋಷಿಸಿತ್ತು. ಇದೀಗ, ಆರೋಪಿ ಓಡಾಡಿರುವ ಸ್ಥಳದಲ್ಲಿ ಸಿಕ್ಕಂತಹ ಕೆಲವು ಫೋಟೋ ಬಿಡುಗಡೆ ಮಾಡಿದೆ.

ಸಮುದ್ರ ಮಾರ್ಗದ ಮೂಲಕ ಪರಾರಿಯಾಗುವ ಸಾಧ್ಯತೆ

ಇನ್ನು ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ಶಂಕಿತರು ಸಮುದ್ರ ಮಾರ್ಗದ ಮೂಲಕ ಪರಾರಿಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆ, ಮಂಗಳೂರು ಕರಾವಳಿ ಕಾವಲು ಪಡೆಗಳಲ್ಲಿ ತಪಾಸಣೆ ನಡೆಸಲು ಪೊಲೀಸರಿಗೆ ಎನ್‌ಐಎ ಸೂಚನೆ ನೀಡಿದೆ.

ಎನ್‌ಐಎ ಸೂಚನೆಯಂತೆ ಇದೀಗ, ಪೊಲೀಸರು ಬಂದರಿನಲ್ಲಿರುವ ಬೋಟ್‌ಗಳನ್ನು ತಪಾಸಣೆ ಮಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಬಾಂಬರ್​ ಓಡಾಟದ ಮತ್ತೆರಡು ವಿಡಿಯೋ ಬಿಡುಗಡೆ​ ಮಾಡಿದ ಎನ್‌ಐಎ

ಎರಡು ವಿಡಿಯೋ ಬಿಡುಗಡೆ

ಕಳೆದ ದಿನ ಶಂಕಿತ ಆರೋಪಿ ಬಿಎಂಟಿಸಿ ಬಸ್‌ ಹಾಗೂ ಬಳ್ಳಾರಿ ಬಸ್‌ ನಿಲ್ದಾಣದಲ್ಲಿ ಓಡಾಟ ನಡೆಸಿರುವ ವಿಡಿಯೊವನ್ನು ಎನ್‌ಐಎ ಬಿಡುಗಡೆ ಮಾಡಿತ್ತು.

ಬಿಎಂಟಿಇ ಬಸ್‌ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ವಿಡಿಯೋ ಬಿಡುಗಡೆ ಮಾಡಲಾಗಿದೆ. ಕ್ಯಾಪ್, ಮಾಸ್ಕ್ ಹಾಗೂ ಕನ್ನಡಕ ಧರಿಸಿರುವ ಆರೋಪಿಯು ಬಸ್‌ನಲ್ಲಿ ಕುಳಿತು ಪ್ರಯಾಣಿಸುತ್ತಿರುವ ದೃಶ್ಯ ಸೆರೆಯಾಗಿದೆ.

ಇನ್ನೊಂದು ವಿಡಿಯೋದಲ್ಲಿ ಶಂಕಿತ ತುಮಕೂರು ಮೂಲಕ ಬಳ್ಳಾರಿಗೆ ತೆರಳಿರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಅಲ್ಲಿಂದ ಬೀದರ್​​ನತ್ತ ಹೊರಟಿರುವುದಾಗಿ ಮಾಹಿತಿ ದೊರೆತಿತ್ತು. ಅದರಂತೆ, ಇದೀಗ ಬಾಂಬರ್ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...