SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ

Date:

ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ಗಂಟೆವರೆಗೆ ನಡೆಯಲಿದೆ ಎಂದು ತಿಳಿಸಿದರು.

ಮಾರ್ಚ್​ 18ರಿಂದ ಆರಂಭವಾಗಲಿರುವ ಎಸ್​​ಎಸ್​​ಎಲ್​ಸಿ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ. ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 9,02,889. ಹೊಸಬರು 8,12,855, ಪುನರಾವರ್ತಿತ 62,845 ವಿದ್ಯಾರ್ಥಿಗಳು. 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 2871.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ ಬಲ, ಮಾಧ್ಯಮಗಳ ಬೆಂಬಲದಿಂದ ಬಿಜೆಪಿ ಬದುಕಿದೆಯೇ?

ಎಸ್​​ಎಸ್​​ಎಲ್​ಸಿ ಪರೀಕ್ಷಾ ವೇಳಾಪಟ್ಟಿ: ಮೇ 18ರಿಂದ ಆರಂಭವಾಗಲಿರುವ ಎಸ್​ಎಲ್​ಎಲ್​ಸಿ ಪರೀಕ್ಷೆ-2; ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವೀತಿಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ, ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...