ಎಸ್‌ಎಸ್‌ಎಲ್‌ಸಿ ಪರೀಕ್ಷೆ | ರಾಜ್ಯಕ್ಕೆ ಕೀರ್ತಿ ತಂದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಸಚಿವ ಮಹದವೇಪ್ಪ

Date:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಂಕಿತಾ ಹಾಗೂ ತೃತೀಯ ಸ್ಥಾನ ಗಳಿಸಿದ ಮಂಡ್ಯದ ತುಂಬಕೆರೆ ವಿದ್ಯಾರ್ಥಿ ನವನೀತ್ ಅವರನ್ನು ಸಮಾಜ ಕಲ್ಯಾಣ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಸನ್ಮಾನಿಸಿದರು.

ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಂಕಿತಾ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಹಾಗೆಯೇ ಮಂಡ್ಯದ ತುಂಬಕೆರೆ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನವನೀತ್ ತೃತೀಯ ಸ್ಥಾನ ಗಳಿಸಿದ್ದಾರೆ. ಈ ವಿದ್ಯಾರ್ಥಿಗಳನ್ನು ಬೆಂಗಳೂರಿನಲ್ಲಿರುವ ಸಚಿವರ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಹೆಚ್ ಸಿ ಮಹದೇವಪ್ಪ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ಸಚಿವರು ಭರವಸೆ ನೀಡಿದರು. ಈ ವೇಳೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀ ಪ್ರವೀಣ್ ಬಾಗೇವಾಡಿ, ಜಂಟಿ ನಿರ್ದೇಶಕರಾದ ಶ್ರೀ ನಾಗೇಶ್, ಸಹಾಯ ನಿರ್ದೇಶಕರಾದ ಶ್ರೀ ಸಿ ಎಂ ಹೊನ್ನರಾಜು ಹಾಗೂ ವಿದ್ಯಾರ್ಥಿಗಳ ಪೋಷಕರು ಈ ವೇಳೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...