ಎಸ್‌.ಎಸ್‌.ಎಲ್‌.ಸಿ. ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Date:

ಸರೋಜಿನಿ ದಾಮೋದರನ್ ಫೌಂಡೇಶನ್ (ಎಸ್‌ಡಿಎಫ್)ನಿಂದ 2025ರಲ್ಲಿ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 2025ರಲ್ಲಿ ಕರ್ನಾಟಕ ರಾಜ್ಯದಿಂದ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಶೇಕಡಾ 90ರಷ್ಟು ಅಂಕ ಅಥವಾ ಎಲ್ಲಾ ವಿಷಯಗಳಲ್ಲಿ A+ ಗ್ರೇಡ್ ಪಡೆದಿರಬೇಕು. ವಿದ್ಯಾರ್ಥಿ ಅಂಗವೈಕಲ್ಯ ಹೊಂದಿದ್ದರೆ ಶೇಕಡಾ 75ರಷ್ಟು ಅಂಕ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 2 ಲಕ್ಷಕ್ಕಿಂತ ಕಡಿಮೆ ಹೊಂದಿರಬೇಕು.

ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅವರ ಪಿಯುಸಿ ಅಧ್ಯಯನದ ಅವಧಿಯಲ್ಲಿ ವರ್ಷಕ್ಕೆ 10,000 ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಬಳಿಕ ಅವರ ಪದವಿಯನ್ನು ಮುಂದುವರಿಸಲು ಪದವಿಗೆ ಅನುಗುಣವಾಗಿ ವರ್ಷಕ್ಕೆ 15,000 ರೂಪಾಯಿಯಿಂದ 75.000 ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸಕ್ತ ವಿದ್ಯಾರ್ಥಿಗಳು www.vidyadhan.org ಗೆ ಭೇಟಿ ನೀಡುವ ಮೂಲಕ ಅಥವಾ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ‘SDF Vidya’ ಆಪ್‌ ಬಳಸುವ ಮೂಲಕ  ಅರ್ಜಿ ಸಲ್ಲಿಸಬಹುದು. 2025 ಮೇ 19ರಿಂದ ಆರಂಭವಾಗಿರುವ ಕರ್ನಾಟಕ ವಿದ್ಯಾರ್ಥಿ ವೇತನದ ಅರ್ಜಿಗಳು 2025 ಜುಲೈ 8ರವರೆಗೆ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಮೊಬೈಲ್‌ ಸಂಖ್ಯೆ +91 8068 33 3500 ಸಹಾಯವಾಣಿಯನ್ನು ಸಂಪಕರ್ಕಿಸಬಹುದಾಗಿದೆ.

ಈ ಬಗ್ಗೆ ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸರೋಜಿನಿ ದಾಮೋದರನ್ ಫೌಂಡೇಶನ್ ಇದರ ಸಂಯೋಜಕರು, ರಾಜ್ಯದ ಎಲ್ಲಾ ಜಾತಿ, ಧರ್ಮಗಳ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಅರ್ಹತಾ ಪರೀಕ್ಷೆ, ವೈಯಕ್ತಿಕ ಸಂದರ್ಶನ ಹಾಗೂ ಅವರ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯುವ ಮೂಲಕ ಅರ್ಹರಾದ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಆದಾಯ ಪ್ರಮಾಣ ಪತ್ರ, ಎಸ್‌.ಎಸ್‌.ಎಲ್‌.ಸಿ. ಅಂಕಪಟ್ಟಿ, ಭಾವಚಿತ್ರ, ಅಂಗವೈಕಲ್ಯತೆ ಇದ್ದರೆ ಅಂಗವೈಕಲ್ಯ ಪ್ರಮಾಣಪತ್ರ, ವಿದ್ಯಾರ್ಥಿಯ ಹೆಸರಿನ ಇ-ಮೇಲ್‌ ಐಡಿಯನ್ನು ಒದಗಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ಅಂಕದ ಆಧಾರದ ಮೇಲೆ ಪದವಿ ಶಿಕ್ಷಣಕ್ಕೂ ವಿದ್ಯಾರ್ಥಿ ವೇತನವನ್ನು ಮುಂದುರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸುಜಾತಾ, ಕಲ್ಪನಾ, ಪವಿತ್ರಾ, ಜೆಸ್ವಿನ್‌ ಉಪಸ್ಥಿತರಿದ್ದರು.

WhatsApp Image 2025 05 08 at 16.45.05 70e5a46e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...