ಆ. 3ರಿಂದ‌ ಮಳೆ ಹಾನಿ ಸರ್ವೆ ಆರಂಭಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ಸೂಚನೆ

Date:

ಕಳೆದ ಜೂನ್ ಮತ್ತು ಜುಲೈನಲ್ಲಿ ಸುರಿದ ಮಳೆಯಿಂದ ಉಂಟಾದ ಬೆಳೆ‌ ಮತ್ತು ಮನೆ ಹಾನಿಗಳನ್ನು ಅಗಸ್ಟ್ 3ರಿಂದ‌ 7ರವರೆಗೆ ಸರ್ವೆ ಕಾರ್ಯ ಮುಗಿಸಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರೊಂದಿಗೆ ಕಂದಾಯ ಇಲಾಖೆಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜೂನ್ ಮತ್ತು ಜುಲೈನಲ್ಲಿ ಸುರಿದ ಮಳೆಯಿಂದಾಗಿ ನೆರೆ ಹಾವಳಿಯಿಂದ ಮಾನವ ಮತ್ತು ಜಾನುವಾರುಗಳ ಜೀವ ಹಾನಿ‌, ಕೃಷಿ ಬಿತ್ತನೆ ಕುರಿತು ಆಯಾ‌ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, “ಮಾನವ ಸಾವು ಪ್ರಕರಣದಲ್ಲಿ ಜನರಿಗೆ ಪರಿಹಾರ ನೀಡುವುದು ಮುಖ್ಯವಲ್ಲ. ಪ್ರಾಣ ಹಾನಿ ಆಗದ ರೀತಿ ಮುನ್ನೆಚ್ಚರಿಕೆ ವಹಿಸುವುದು ನಮ್ಮ ಆದ್ಯತೆ ಆಗಬೇಕು. ಅದಕ್ಕಾಗಿ ಮಳೆಗಾಲ ಸಂದರ್ಭದಲ್ಲಿ ವಹಿಸಬೇಕಾದ ‌ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆಡಳಿತ ವರ್ಗ ಹೆಚ್ಚಿನ ಗಮನ ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಪತ್ತು ನಿರ್ವಹಣೆ ಹೆಸರಿನಲ್ಲಿ ಹಣ ದುರುಪಯೋಗವಾದಲ್ಲಿ ಅದು ಕೆಟ್ಟ ಆಡಳಿತಕ್ಕೆ ಅವಕಾಶ ಮಾಡಿಕೊಡುತ್ತದೆ. ಪರಿಹಾರ ವಿತರಣೆಯ ಕೆಲವೊಂದು ಪ್ರಕರಣದಲ್ಲಿ ಸ್ಯಾಟಲೈಟ್ ಫೋಟೋಗಳನ್ನು ಪರೀಕ್ಷಿಸಿ ಜಿಲ್ಲಾಧಿಕಾರಿಗಳು ಪರಿಹಾರ ನೀಡಬೇಕು” ಎಂದು ತಿಳಿಸಿದರು.

“ಭೂಮಿ ತಂತ್ರಾಂಶದಲ್ಲಿ ಪಹಣಿ ಪತ್ರಿಕೆ ತಿದ್ದುಪಡಿ, ವರ್ಗಾವಣೆ ವಿಷಯ ಕುರಿತು ಚರ್ಚೆಯಲ್ಲಿ ಕಲಬುರಗಿ ವಿಭಾಗದಲ್ಲಿ
6 ತಿಂಗಳಿನಿಂದ 5 ವರ್ಷದೊಳಗಿನ 5,266 ಪ್ರಕರಣಗಳು ಬಾಕಿ ಇರುವುದನ್ನು ಗಮನಿಸಿದ ಸಚಿವ ಕೃಷ್ಣ‌ಭೈರೇಗೌಡ ಅವರು, ಇಂತಹ ಪ್ರಕರಣಗಳಿಂದಲೆ ಜನರು ಬೇಸತ್ತು ಹೋಗಿ ನನ್ನನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಬರುತ್ತಿದ್ದಾರೆ” ಎಂದು‌ ಬೇಸರ ವ್ಯಕ್ತಪಡಿಸಿದರು.

“ಮ್ಯೂಟೇಷನ್ ಡಿಸ್ಪೂಟ್ ಪ್ರಕರಣಗಳನ್ನು 4-5 ವಿಚಾರಣೆಗಳಲ್ಲಿ‌ ಮುಗಿಸಿ ಜನರಿಗೆ ನೆಮ್ಮದಿ ಕಲ್ಪಿಸಿ” ಎಂದು ತಹಶೀಲ್ದಾರರಿಗೆ ಖಡಕ್ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಮಾತನಾಡಿ, “ಮೂರು ತಿಂಗಳ ಒಳಗೆ ಇಂತಹ ಪ್ರಕರಣಗಳು‌ ವಿಲೇವಾರಿ ಮಾಡಬೇಕು. ಜಿಲ್ಲಾಧಿಕಾರಿಗಳು ಮಾಸಿಕ‌ ಪ್ರಗತಿ ಪರಿಶೀಲನೆ ಮಾಡಬೇಕು. ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಹೊರತಾಗಿ ಇತರೆ ಇಲಾಖೆಯ ಕೆಲಸಗಳು ಇವೆ. ಆದರೆ, ಮಾತೃ ಇಲಾಖೆಯ ಮೂಲ‌ ಕೆಲಸ ಮಾತ್ರ ಮರೆಯಬಾರದು” ಎಂದರು.

“ಕಲಬುರಗಿ ವಿಭಾಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ 3 ತಿಂಗಳಿನಲ್ಲಿ 24 ಸೇರಿದಂತೆ ರಾಜ್ಯದಲ್ಲಿ ಈ ವರ್ಷ ಸಿಡಿಲು, ಮಿಂಚಿನಿಂದ 80 ಜನ ಮೃತಪಟ್ಟಿದ್ದಾರೆ. ಸಿಡಿಲು ಕುರಿತು ಹೆಚ್ಚಿನ ಅರಿವು ನೀಡಿದಲ್ಲಿ ಸಾವು ತಪ್ಪಿಸಬಹುದಿತ್ತು. ನೊಂದ ಕುಟುಂಬಗಳಿಗೆ ಸರ್ಕಾರ 24 ಗಂಟೆಯಲ್ಲಿ ಪರಿಹಾರ ನೀಡಬಹುದು. ಆದರೆ, ಹೋದ ಜೀವ ಮತ್ತೆ ಮರುಕಳಿಸಲು ಸಾಧ್ಯವಿಲ್ಲ” ಎಂದರು.

“ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ 2020-21ನೇ ಸಾಲಿನ ನೆರೆ ಹಾವಳಿಯ ಕಾಮಗಾರಿಗಳು ಇನ್ನು ಪ್ರಗತಿಯಲ್ಲಿರುವುದಕ್ಕೆ ಸಚಿವ ಕೃಷ್ಣಭೈರೇಗೌಡ ಅವರು ಅಸಮಾಧಾನ ವ್ಯಕ್ತಪಡಿಸಿ, ರಸ್ತೆ, ಶಾಲೆ, ಸೇತುವೆ ದುರಸ್ತಿಗೆ ವಿಪತ್ತು ನಿರ್ವಹಣೆಯಲ್ಲಿ 1-2 ಲಕ್ಷ ರೂ. ಅನುದಾನ ನೀಡಲಾಗುತ್ತದೆ. ಮಳೆಗಾಲ ಹೋಗಿ ಮತ್ತೆ ಮಳೆಗಾಲ ಬಂದರೂ ಕೆಲಸ ಇನ್ನು ಮುಗಿಯಲ್ಲ ಅಂದರೆ ಏನರ್ಥ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ರಿಂಗ್ ರಸ್ತೆ ಯೋಜನೆ ನಿಲ್ಲಿಸುವುದಿಲ್ಲ, ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ: ಡಿಸಿಎಂ ಭರವಸೆ

“ಒಟ್ಟಾರೆಯಾಗಿ ಹಳೇ ವರ್ಷಗಳ ವಿಪತ್ತು ನಿರ್ವಹಣೆ ಕೆಲಸಗಳನ್ನು ಮತ್ತು ಕೊಪ್ಪಳ, ಯಾದಗಿರಿಯಲ್ಲಿ ಕೋವಿಡ್ ನಿರ್ವಹಣೆಯ ಬಾಕಿ ಅನುದಾನ ಮುಂದಿನ 10 ದಿನದಲ್ಲಿ ಖರ್ಚು ಮಾಡಿ, ಇಲ್ಲ ಸರ್ಕಾರಕ್ಕೆ ಅನುದಾನ ಹಿಂದಿರುಗಿಸಿ” ಎಂದು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

“ಕಂದಾಯ ಇಲಾಖೆಯು ಸರ್ಕಾರದ‌ ಮಾತೃ ಇಲಾಖೆಯಾಗಿದ್ದು, ಇಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳು ಸಹ ಮಾತೃ ಹೃದಯಿಗಳಾಗಿರಬೇಕು. ಸರ್ಕಾರದ ಉದ್ದೇಶ ಮತ್ತು ಧ್ಯೆಯೋದ್ದೇಶಗಳನ್ನು ಅರಿತು ಜನರಿಗೆ ಉತ್ತಮ ಆಡಳಿತ ನೀಡಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆಯ ಆಯುಕ್ತ ಪಿ ಸುನೀಲ್ ಕುಮಾರ್, ಭೂಮಾಪನ‌ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತ ಜೆ ಮಂಜುನಾಥ, ನೋಂದಣಿ ಮಹಾ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತೆ ಡಾ. ಬಿ ಆರ್ ಮಮತಾ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ವಿಜಯ ನಗರ, ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...