ವಿವಿಧ ಬೇಡಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ

Date:

2017ರ ವೃಂದ ಮತ್ತು ನೇಮಕಾತಿ ನಿಯಮಗಳು ಅದಕ್ಕಿಂತಲೂ ಮುಂಚೆ ನೇಮಕಾತಿಗೊಂಡಿರುವ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಕಾರ್ಯಾದೇಶ ಹೊರಡಿಸಿದೆ. ಅಲ್ಲದೆ ಮೂಲತಃ 1 ರಿಂದ 7 ಹಾಗೂ 8 ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಅಂತ ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದೆ. ಸರ್ಕಾರದ ಈ ಆದೇಶದಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಸೋಮವಾರ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳ ಶಿಕ್ಷಕರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ. ಶಿಕ್ಷಕರು ಅನೇಕ ಬಾರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಣ ಇಲಾಖೆಯ ಮೊರೆ ಹೋಗಿದ್ದರು. ಸಚಿವರ ಭೇಟಿಯಿಂದಲೂ ನಿರಾಸೆ ಉಂಟಾಗಿದ್ದರಿಂದ ಇದೀಗ ಬೀದಿಗಿಳಿಯಲು ನಿರ್ಧರಿಸಿದ್ದೇವೆ ಎಂದು ಹೋರಾಟ ನಿರತ ಶಿಕ್ಷಕರು ಹೇಳಿದರು.

ಪ್ರಮುಖ ಬೇಡಿಕೆಗಳು : 2016 ಕ್ಕಿಂತ ಮುಂಚೆ ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು. ಈ ಮೊದಲಿದ್ದ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮುಂಚೆ ನೇಮಕಾತಿ ಹೊಂದಿದ ಹಾಗೂ ಬಿ.ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಬಡ್ತಿಗೆ ಪರಿಗಣಿಸಬೇಕು. ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೆ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್‌ ಕುಮಾರ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಮ ಮೊಗವೀರ, ಕೋಶಾಧಿಕಾರಿ ಶ್ರೀನಾಥ ಜಿ.ಪೂಜಾರಿ ಗೌರವಾಧ್ಯಕ್ಷೆ ಸುಜಾತ ಶೆಟ್ಟಿ, ಉಪಾಧ್ಯಕ್ಷೆ ಶಶಿಧರ ಶೆಟ್ಟಿ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...