ಬೆಂಗಳೂರಿನ ಮಹಾರಾಣಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಓರ್ವ ವಿದ್ಯಾರ್ಥಿನಿ ಡೆತ್‌ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪಾವನಾ(19) ಮೃತ ಯುವತಿ. ಮಹಾರಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ಓದುತ್ತಿದ್ದರು. ಜೂನ್ 16ರಂದು ಹಾಸ್ಟಲ್‌ನ ರೂಮ್ ನಂಬರ್ 17ರಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೇ ದಿನ ರಾತ್ರಿ 11.30ರ ಸುಮಾರಿಗೆ ಗೆಳತಿಯರು ಪಾವನಾ ರೂಂನಲ್ಲಿ ಇಣುಕಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಬಗ್ಗೆ ಕೂಡಲೇ ವಿದ್ಯಾರ್ಥಿನಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೈಗ್ರೌಂಡ್ಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಕಲೆಹಾಕಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಂದಕಕ್ಕೆ ಬಿದ್ದ ಕಾರು; ಯುವತಿ ಸಾವು
ಈ ವೇಳೆ, ಪೊಲೀಸರಿಗೆ ಪಾವನಾ ಬರೆದಿಡ್ಡ ಡೆತ್‌ನೋಟ್ ಪತ್ತೆಯಾಗಿದೆ. ಆ್ಯಪ್ವೊಂದರಲ್ಲಿ ಪಾವನಾ ₹15 ಸಾವಿರ ಹೂಡಿಕೆ ಮಾಡಿದ್ದು ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ.
ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.




