ಸದ್ಯ ರಾಜ್ಯದಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಈ ಬಿಸಿಲು ಮತ್ತು ಒಣ ಹವೆ ಮುಂದಿನ ಎರಡು ವಾರಗಳ ಕಾಲ ಮುಂದುವರೆಯಲಿದ್ದು, ಏಪ್ರಿಲ್ 15ರವರೆಗೂ ತಾಪಮಾನ ಏರಿಕೆಯಾಗಲಿದೆ. ಅಲ್ಲದೇ, ಏಪ್ರಿಲ್‌ನ ಮೊದಲ ಎರಡು ವಾರ ಕಡುಬೇಸಿಗೆ ಇರಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (KSNMDC) ಹೇಳಿದೆ.
ಮಾರ್ಚ್ 26 ಮತ್ತು ಮಾರ್ಚ್ 27ರಂದು ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಬೆಳಗಾವಿಯ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿದ್ದು, ಮಾರ್ಚ್ 26ರಂದು ಸಹ ಬೆಳಗಾವಿಯ ಸುತ್ತಮುತ್ತ ಹಗುರ ಮಳೆಯಾಗಲಿದೆ. ರಾಜ್ಯದಾದ್ಯಂತ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದೆಲ್ಲೆಡೆ ಒಣಹವೆ ಮುಂದುವರಿಯಲಿದೆ ಎಂದಿದೆ.
ಏಪ್ರಿಲ್ 3ನೇ ವಾರದ ಬಳಿಕ ಪರಿಸ್ಥಿತಿ ತಹಬದಿಗೆ ಬರಲಿದೆ. ಪೂರ್ವ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆ ಇದೆ. ಆಯ್ದ ಕಡೆಗಳಲ್ಲಿ ಮಾರ್ಚ್ ತಿಂಗಳ ವಾಡಿಕೆಯ 9 ಮಿ.ಮೀ. ಬದಲಿಗೆ 10 ಮಿ.ಮೀ. ಬೇಸಿಗೆ ಮಳೆಯಾಗಿದ್ದು, ಉಷ್ಣಾಂಶ ಏರಿಕೆಯಿಂದ ಮಳೆಯ ಪ್ರಮಾಣವೂ ಮುಂದಿನ ದಿನಗಳಲ್ಲಿ ಉತ್ತಮವಾಗಿರುತ್ತದೆ ಎಂದು ಮುನ್ಸೂಚನೆ ನೀಡಿದೆ.
ದಿನಾಂಕ 26 ಮಾರ್ಚ್ 08:30 am ದಾಖಲೆ ಆಗಿರೋ ಮಳೆ ವಿವರ: @KarnatakaSNDMC
Past 24-hour realized rainfall details pic.twitter.com/5cA7dlrbln
— Revenue Department (Disaster Management) (@SEOC_Karnataka) March 26, 2024
ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ಮತ್ತೆ ಇಬ್ಬರು ಎನ್‌ಐಎ ವಶಕ್ಕೆ
- ಮೈಸೂರಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- ಮಂಡ್ಯದಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- ಕಾರವಾರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- ವಿಜಯಪುರದಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- ಬೀದರ್‌ನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.




