ಸೂರಜ್ ರೇವಣ್ಣ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ

Date:

ಜೆಡಿಎಸ್‌ ಕಾರ್ಯಕರ್ತನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಜೂನ್‌ 23ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸೂರಜ್‌ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಹಾಸನ ಎಸ್​ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ, ತನಿಖೆಗೆ ತಯಾರಿ ಮಾಡಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೂರಜ್‌ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 377, 342, 506, 34ರ ಅಡಿ ಶನಿವಾರ ಪ್ರಕರಣ ದಾಖಲಾಗಿತ್ತು. ದೂರು ದಾಖಲಾದ ಬೆನ್ನಲ್ಲೇ, ಪೊಲೀಸರು ಸೂರಜ್ ಅವರನ್ನು ಬಂಧನ ಮಾಡಿದ್ದಾರೆ. ಸಕಲೇಶಪುರದ ಡಿವೈಎಸ್‌ಪಿ ಪ್ರಮೋದ್ ಸೂರಜ್ ಅವರನ್ನು ಬಂಧಿಸಿರುವ ಪೊಲೀಸ್ ಅಧಿಕಾರಿಯಾಗಿದ್ದಾರೆ. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್‌ಪಿಗೂ ದೂರಿನ ಪ್ರತಿಯನ್ನ ಮೇಲ್ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ; ಕರಾವಳಿ ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

ವೈದ್ಯಕೀಯ ಪರೀಕ್ಷೆಗಾಗಿ ಸೂರಜ್ ರೇವಣ್ಣ ಅವರನ್ನು ಇಂದು ಆಸ್ಪತ್ರೆಗೆ ಹಾಜರುಪಡಿಸಲಾಗಿದೆ. ಇಂದೇ ನ್ಯಾಯಾಧೀಶರ ಮುಂದೆ ಸೂರಜ್ ಅವರನ್ನು ಹಾಜರುಪಡಿಸುವ ಸಾಧ್ಯತೆ ಇದೆ.

“ದೂರು ಬಂದಿದೆ. ಎಫ್‌ಐಆರ್‌ ಕೂಡ ಆಗಿದೆ. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡುತ್ತೇವೆ. ಇತರಹದ ಪ್ರಕರಣಗಳನ್ನು ಸಿಐಡಿಗೆ ನೀಡಬೇಕಾಗುತ್ತದೆ. ಮುಂದೆ ಏನು ಕ್ರಮ ತೆಗೆದುಕೊಳ್ಳಬೇಕೆಂಬ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ” ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್ ಹೇಳಿದರು.

“ಇದು ಗಂಭೀರವಾದ ಆರೋಪ ಪ್ರಕರಣವಾಗಿರುವುದರಿಂದ ಕೂಲಂಕಷವಾಗಿ ತನಿಖೆ ಮಾಡುತ್ತೇವೆ. ಸೂರಜ್ ರೇವಣ್ಣ ದಾಖಲಿಸಿರುವ ರಿಟರ್ನ್ ದೂರಿನ ಬಗ್ಗೆ ಸಹ ಪೊಲೀಸರು ತನಿಖೆ ಮಾಡುತ್ತಾರೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...