ಶಾಲೆಗಳ ಶೌಚಾಲಯ ಶುಚಿಗೊಳಿಸಲು ಸಿಬ್ಬಂದಿ ನೇಮಕ ಬಗ್ಗೆ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

Date:

ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, “ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಲೆ-ಕಾಲೇಜುಗಳ ಹಾಸ್ಟೆಲ್‌ಗಳಲ್ಲಿಯೂ ಈ ಬಗ್ಗೆ ನಿಗಾವಹಿಸುವಂತೆ ಸಮಾಜ ಕಲ್ಯಾಣ ಸಚಿವರಿಗೂ ತಿಳಿಸಿದ್ದೇನೆ” ಎಂದಿದ್ದಾರೆ.

“ಪ್ರತಿಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಬೇಕು ಮತ್ತು ಅವುಗಳನ್ನು ಪ್ರತಿದಿನ ಶುಚಿಗೊಳಿಸಲು ಸಿಬ್ಬಂದಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಒಂದು ಸಮೀಕ್ಷೆ ನಡೆಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿ ತರಿಸುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ತಿಳಿಸಿದ್ದೇನೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...